Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಶಾಸಕ ವಿರೇಂದ್ರ ಪಪ್ಪಿ ಇಡಿ ವಶಕ್ಕೆ..!

---Advertisement---

ಚಿತ್ರದುರ್ಗ, ಆಗಸ್ಟ್. 22 : ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರನ್ನ ಇಡಿ ವಶಕ್ಕೆ‌ಪಡೆದುಕೊಂಡಿದೆ. ಇಂದು ಬೆಳಗ್ಗೆಯೇ ಇಡಿ ಚಿತ್ರದುರ್ಗ ಶಾಸಕ ವಿರೇಂದ್ರ ಪಪ್ಪಿ ಅವರ ಚಳ್ಳಕೆರೆ ನಿವಾಸದ ಮೇಲೆ ದಾಳಿ ನಡೆಸಿತ್ತು. ಆನ್ಲೈನ್ ಆಪ್ ಕಂಪನಿಗಳಿಗೆ ವಿರೇಂದ್ರ ಪಪ್ಪಿ ಅವರು ಹಣ ವರ್ಗಾವಣೆ ಮಾಡಿರುವ ಆರೋಪ ಪಪ್ಪಿ ಅವರ ಮೇಲಿದೆ. ಹೀಗಾಗಿ ಇಡಿ ಅವರ ಮನೆ ಮೇಲೆ ದಾಳಿ ನಡೆಸಿ, ಅವರನ್ನು ಸಿಕ್ಕಿಂ ಹೊಟೇಲ್ ನಲ್ಲಿ ಬಂಧನ ಮಾಡಲಾಗಿದೆ.

ಚಳ್ಳಕೆರೆ ನಗರದಲ್ಲಿನ ಶಾಸಕ ಕೆಸಿ ವಿರೇಂದ್ರ ಪಪ್ಪಿ ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲ ಕೆಸಿ ವೀರೇಂದ್ರ ಪಪ್ಪಿ ಅವರ ಅಣ್ಣ ನಾಗರಾಜ, ತಿಪ್ಪೇಸ್ವಾಮಿ, ಮನೆ ಮೇಲೂ ಇಡಿ ದಾಳಿ ನಡೆಸಿದೆ. ಹಳೆ ಟೌನ್ ವೀರಭದ್ರ ಸ್ವಾಮಿ ದೇವಸ್ಥಾನ ಬಳಿ‌ ಇರುವ ನಿವಾಸದ ಮೇಲೂ ದಾಳಿಯಾಗಿದೆ. ಆಕ್ರಮ ಹಣ ವರ್ಗಾವಣೆ  ಕುರಿತಂತೆ ದಾಖಲೆ ಇ.ಡಿ. ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.  ದೆಹಲಿ ಎನ್ ಫೋರ್ಸ್ ಮೆಂಟ್ ಟೀಂನಿಂದ  ದಾಳಿ ನಡೆದಿದೆ.

 

ಆಕ್ರಮ ಹಣ ವರ್ಗಾವಣೆ, ಆಕ್ರಮ ಆಸ್ತಿಯ  ಬಗ್ಗೆ ಇ.ಡಿ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.  ಆನ್ ಲೈನ್ ಗೇಮಿಂಗ್ ಆ್ಯಪ್ ಕಂಪನಿಗಳಿಗೆ ಆಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮೇಲಿದೆ. ಇದಕ್ಕೆ ಸಂಬಂಧಿಸಿದಂತೆ ಗೋವಾದಲ್ಲಿ ಶಾಸಕ ವೀರೇಂದ್ರ ಪಪ್ಪಿ ಮೇಲೆ 2 ಎಫ್‌ಐಆರ್ ದಾಖಲಾಗಿವೆ. ಈ ಕೇಸ್ ನಲ್ಲೇ ಆಕ್ರಮ ಹಣ ವರ್ಗಾವಣೆ ಆಗಿದೆ ಎಂದು ಇ.ಡಿ. ಅಧಿಕಾರಿಗಳು ಇಸಿಐಆರ್ ದಾಖಲಿಸಿಕೊಂಡು ಇಂದು ಬೆಳಿಗ್ಗೆಯೇ ದಾಳಿ ನಡೆಸಿ ದಾಖಲೆಪತ್ರಗಳ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment