Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

2025ರ ದಸರಾ‌ ಉದ್ಘಾಟಿಸಲಿದ್ದಾರೆ ಭಾನು ಮುಷ್ತಾಕ

---Advertisement---

ಬೆಂಗಳೂರು: 2025ರ ಮೈಸೂರು ದಸರಾ ಕಾರ್ಯಕ್ರಮವನ್ನು ಯಾರು ಉದ್ಘಾಟನೆ ಮಾಡಬಹುದು ಎಂದು ಎಲ್ಲರಿಗೂ ಕುತೂಹಲವಿತ್ತು. ಅದರಲ್ಲೂ ಈ ಭಾರೀಯ ಮೈಸೂರು ದಸರಾ ಉದ್ಘಾಟನೆ ಮಾಡುವ ವಿಚಾರಕ್ಕೆ ಅನೇಕ ಗಣ್ಯರ ಹೆಸರುಗಳು ಕೇಳಿ ಬಂದಿತ್ತು. ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಹೆಸರುಗಳು ಚರ್ಚೆಯಲ್ಲಿತ್ತು. ಇದೀಗ ಆ ಕುತೂಹಲಕ್ಕೆ‌ ಇದೀಗ ಬ್ರೇಕ್ ಬಿದ್ದಿದ್ದು, ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡುವುದರ ಬಗ್ಗೆ ಘೋಷಣೆ ಮಾಡಿದ್ದಾರೆ. ಬೂಕರ್ ಪ್ರಶಸ್ತಿ ಪಡೆದ ಭಾನು ಮುಷ್ತಾಕ ಅವರು ಉದ್ಘಾಟನೆ ಮಾಡಲಿದ್ದಾರೆ.

2025ರ ಸೆಪ್ಟೆಂಬರ್ 22 ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 2 ರಂದು ಮೈಸೂರು ಅರಮನೆ ಆವರಣದಲ್ಲಿ ಜಂಬೂಸವಾರಿ ನಡೆಯಲಿದೆ. ಈ ಬಾರಿಯ ದಸರಾದಲ್ಲಿ ಭಾರತೀಯ ವಾಯುಪಡೆಯಿಂದ ಏರ್ ಶೋ ಕೂಡ ನಡೆಸಲು ಒಪ್ಪಿದ್ದಕ್ಕಾಗಿ ಕೇಂದ್ರದ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಅರ್ಪಿಸಿದ್ದಾರೆ.

ಜೊತೆಗೆ ರಾಜನಾಥ್ ಸಿಂಗ್ ಅವರನ್ನು ಮೈಸೂರು ದಸರಾದಲ್ಲಿ ಪಾಲ್ಗೊಳ್ಳುವುದಕ್ಕೆ ಆಹ್ವಾನ ನೀಡಿದ್ದಾರೆ. ಈ ಬಾರಿ ಮೈಸೂರು ದಸರಾ 11 ದಿನಗಳ ಕಾಲ ನಡೆಯಲಿದೆ. ಮೈಸೂರು ದಸರಕ್ಕಾಗಿ ಈಗಾಗಲೇ ಭರದ ಸಿದ್ಧತೆಗಳು ನಡೆಯುತ್ತಿವೆ. ಸೆಪ್ಟೆಂಬರ್ 22 ರಿಂದ ಆಕ್ಟೋಬರ್ 2 ರವರೆಗೆ ಮೈಸೂರು ದಸರಾ ನಡೆಯಲಿದೆ. ಈಗಾಗಲೇ ಚಿನ್ನದ ಅಂಬಾರಿ ಹೊರಲಿರುವ ಆನೆಗಳು ತಂಡ ಮೈಸೂರಿಗೆ ಆಗಮಿಸಿದೆ. ಇನ್ನು ಈ ಬಾರಿ ಉದ್ಘಾಟನೆ ಮಾಡುತ್ತಿರುವ ಭಾನು ಮುಷ್ತಾಕ್ ಅವರು ಬರೆದ ಹಾರ್ಟ್ ಲ್ಯಾಂಪ್ ಕೃತಿಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಬಂದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment