ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 22 : ಕಾಮುಕರಿಂದ ಹತ್ಯೆಗೀಡಾಗಿರುವ ವಿದ್ಯಾರ್ಥಿನಿ ವರ್ಷಿತಾಳ ಕುಟುಂಬಕ್ಕೆ ಸರ್ಕಾರ ಒಂದು ಕೋಟಿ ರೂ.ಗಳ ಪರಿಹಾರ ನೀಡಿ ಯಾರಿಗಾದರೂ ಒಬ್ಬರಿಗೆ ಸರ್ಕಾರಿ ನೌಕರಿಯನ್ನು ಕೊಡುವಂತೆ ರಾಹುಲ್‍ಗಾಂಧಿ ವಿಚಾರ ವೇದಿಕೆ, ಜಿಲ್ಲಾ ಯುವ ಕಾಂಗ್ರೆಸ್, ಸಂವಿಧಾನ ರಕ್ಷಣಾ ಸಮಿತಿಯಿಂದ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ದಲಿತ ಕುಟುಂಬಕ್ಕೆ ಸೇರಿದ ವಿದ್ಯಾರ್ಥಿನಿ ವರ್ಷಿತಾಳ ಮೇಲೆ ಅತ್ಯಾಚಾರವೆಸಗಿ ಸುಟ್ಟುಹಾಕಿರುವುದರಿಂದ ಶಾಲಾ-ಕಾಲೇಜುಗಳಿಗೆ ಹೋಗಲು ಹೆಣ್ಣುಮಕ್ಕಳು ಭಯಪಡುವಂತಾಗಿದೆ. ಹಾಗಾಗಿ ಹತ್ಯೆಯಲ್ಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು.
ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಹೆಚ್.ಸಮರ್ಥರಾಯ್, ಎನ್.ಎಸ್.ಯು.ಐ. ರಾಜ್ಯ ಪ್ರಧಾನ ಕಾರ್ಯದರ್ಶಿ ವಿನಯ್‍ಗೋಡೆಮನೆ, ಮಹಮದ್ ಆಜಾಂ, ಖಲೀಲ್‍ವುರ್
ರೆಹಮಾನ್, ವಸೀಂ, ಅರ್ಜುನ್, ರೋಹನ್, ಸೈಯದ್‍ಸಾಧಿಕ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.









