Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ವರ್ಷಿತಾ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡಿ : ಕರುನಾಡ ವಿಜಯಸೇನೆ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 22 : ಕೋವೇರಹಟ್ಟಿಯ ವಿದ್ಯಾರ್ಥಿನಿ ವರ್ಷಿತಾಳ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವ ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಿ ನೊಂದ ಕುಟುಂಬಕ್ಕೆ ಒಂದು ಕೋಟಿ ರೂ.ಗಳ ಪರಿಹಾರ ನೀಡುವಂತೆ ಒತ್ತಾಯಿಸಿ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಹಾಸ್ಟೆಲ್‍ನಲ್ಲಿದ್ದ ವರ್ಷಿತಾಳನ್ನು ಹೊರಗೆ ಕರೆದುಕೊಂಡು ಹೋಗಿ ಗೋನೂರು ಸಮೀಪ ಅತ್ಯಾಚಾರವೆಸಗಿ ಸುಟ್ಟು ಹಾಕಿರುವುದು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸಿದೆ. ಎಲ್ಲಾ ಹಾಸ್ಟೆಲ್‍ಗಳ ಸುತ್ತಮುತ್ತ ಸಿ.ಸಿ.ಕ್ಯಾಮರಾ ಇಲ್ಲದಿರುವುದು ಇಂತಹ ಅನಾಹುತಗಳಿಗೆ ಕಾರಣ. ಈ ಹಿಂದೆ ಇದ್ದ ಓಬವ್ವ ಪೊಲೀಸ್ ಪಡೆಯನ್ನು ಮರು ಸ್ಥಾಪಿಸಿ ಮಹಿಳಾ ಡಿ.ವೈ.ಎಸ್ಪಿ. ತಂಡ ರಚಿಸಬೇಕು. ನಗರ ಸೇರಿದಂತೆ ಸುತ್ತಮುತ್ತ ಐದಾರು ಕಿ.ಮೀ. ವ್ಯಾಪ್ತಿಯ ಎಲ್ಲಾ ರಸ್ತೆಗಳಲ್ಲಿ ಸಿ.ಸಿ.ಕ್ಯಾಮರಾಗಳನ್ನು ಅಳವಡಿಸಬೇಕು. ಭದ್ರತೆ ಇಲ್ಲದಿರುವುದಕ್ಕೆ ಇಂತಹ ಅನೈತಿಕ, ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿವೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.

ಕರುನಾಡ ವಿಜಯಸೇನೆ ಮಹಿಳಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಮಲಮ್ಮ, ರತ್ನಮ್ಮ, ಅವಿನಾಶ್, ಮುಜಾಯಿದ್, ಜಗದೀಶ್, ಅಖಿಲೇಶ್,  ವಿಜಯ್‍ಬಾಬು, ಸುಶೀಲ, ಪ್ರದೀಪ್, ತಿಪ್ಪೇಸ್ವಾಮಿ, ಯಶವಂತ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...