ಇಂದು ನಟ ದರ್ಶನ್ ಅಭಿಮಾನಿಗಳಿಗೆ ಹಬ್ಬವೋ ಹಬ್ಬ. ಯಾಕಂದ್ರೆ ಡೆವಿಲ್ ಸಿನಿಮಾದ ಇದ್ದರೆ ನೆಮ್ದಿಯಾಗಿರ್ಬೇಕು ಹಾಡು ರಿಲೀಸ್ ಆಗಿದೆ. ಬೆಳಗ್ಗೆ ರಿಲೀಸ್ ಆದ ಹಾಡು ನೋಡ ನೋಡುತ್ತಲೇ ಮಿಲಿಯನ್ ಗಟ್ಟಲೇ ವೀವ್ಸ್ ಆಗಿದೆ. ನಿನ್ನೆಯಿಂದಾನೂ ತುದಿಗಾಲಿನಲ್ಲಿ ನಿಂತು ಈ ಹಾಡಿಗೋಸ್ಕರ ಕಾಯ್ತಾ ಇದ್ರು ಅಭಿಮಾನಿಗಳು.
ದರ್ಶನ್ ಈ ಹಾಡಲ್ಲಿ ಸ್ಟೈಲೀಶ್ ಆಗಿ,ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ಯೂಟ್ಯೂಬ್ ಚಾನೆಲ್ ನಲ್ಲಿ ಹಾಡು ರಿಲೀಸ್ ಆಗಿದೆ. ಅನಿರುದ್ಧ್ ಶಾಸ್ತ್ರಿ ಸಾಹಿತ್ಯ ಬರೆದಿದ್ದು, ದೀಪಕ್ ಬಾಲು ಹಾಡಿದ್ದಾರೆ. ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಸಂತೂ ಕೊರಿಯೋಗ್ರಫಿ ಅದ್ಭುತವಾಗಿದೆ. ಮಿಲನಾ ಪ್ರಕಾಶ್ ಅವರ ನಿರ್ದೇಶನದಲ್ಲಿ ಬಂದಿರುವ ಡೆವಿಲ್ ಅಕ್ಟೋಬರ್ ನಲ್ಲಿ ತೆರೆಗೆ ಬರುವುದಕ್ಕೆ ಸಿದ್ಧವಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್, ಈ ಸಿನಿಮಾ ಹಾಡು ಬಿಡುಗಡೆಯ ಸಂದರ್ಭದಲ್ಲಿ ಅಭಿಮಾನಿಗಳ ಜೊತೆಗೆ ಅವರಿರುವುದಕ್ಕೆ ಆಗಿಲ್ಲ. ಈ ಹಾಡು ಆಗಸ್ಟ್ 15ರಂದೇ ರಿಲೀಸ್ ಆಗಬೇಕಿತ್ತು. ಆದರೆ ದರ್ಶನ್ ಅವರು ಹಿಂದಿನ ದಿನವೇ ಜೈಲು ಸೇರಿದ ಪರಿಣಾಮ ಅದು ಸಾಧ್ಯವಾಗಲಿಲ್ಲ. ಇದೀಗ ಸಿನಿಮಾದ ಜೊತೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಿಂತಿದ್ದಾರೆ. ಅವರ ಜೊತೆಗೆ ದರ್ಶನ್ ಅವರ ತಮ್ಮ ದಿನಕರ್ ತುಗೂದೀಪ, ಧನ್ವಿರ್ ಹಾಗೇ ರಚಿತಾ ರಾಮ್ ಕೂಡ ತಾನೂ ಸಿನಿಮಾದ ಪ್ರಚಾರ ಮಾಡ್ತೀನಿ ಎಂಬ ಭರವಸೆಯನ್ನ ನೀಡಿದ್ದಾರೆ. ಸದ್ಯ ಡೆವಿಲ್ ಸಿನಿಮಾ ಕಂಪ್ಲೀಟ್ ಆಗಿದ್ದು, ದರ್ಶನ್ ಅವರು ಜೈಲಿನಲ್ಲಿಯೇ ಇದ್ದರು ಕೂಡ ಸಿನಿಮಾ ರಿಲೀಸ್ ಆಗಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















