Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಆಗಸ್ಟ್ 28ರವರೆಗೆ ವೀರೇಂದ್ರ ಪಪ್ಪಿ ಇಡಿ ವಶಕ್ಕೆ..!

---Advertisement---

ಚಿತ್ರದುರ್ಗ: ಬೆಟ್ಟಿಂಗ್ ಆ್ಯಪ್ ಗಳಿಗೆ ಹಣ ವರ್ಗಾವಣೆ ಆರೋಪ ಸಂಬಂಧ ಈಗಾಗಲೇ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೀಗ ಕೋರ್ಟ್ ಆಗಸ್ಟ್ 28ರವರೆಗೆ ವೀರೇಂದ್ರ ಪಪ್ಪಿಯನ್ನ ಇಡಿ ವಶಕ್ಕೆ ನೀಡಿದೆ. ವಾದ ಪ್ರತಿವಾದ ಕೇಳಿದ ಕೋರ್ಟ್ ನಾಲ್ಕು ದಿನಗಳ ಕಾಲ ಇಡಿ ವಶಕ್ಕೆ ನೀಡಿದೆ. ಬೆಂಗಳೂರಿನ 35ನೇ ಸಿಸಿಹೆಚ್ ಕೋರ್ಟ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ವೀರೇಂದ್ರ ಪಪ್ಪಿ ಅವರ ಪರ ವಕೀಲರು ಕಸ್ಟಡಿಗೆ ನೀಡದಂತೆ ಕೋರ್ಟ್ ಗೆ ಮನವಿ ಮಾಡಿದರು. ಆದರೆ ಇದೇ ವೇಳೆ ಇಡಿ ಪರ ವಕೀಲರು ಕೂಡ ತನ್ನ ವಾದ ಮಂಡಿಸಿದರು. ಈ ತನಿಖೆ ತುಂಬಾನೇ ಅಗತ್ಯವಿದೆ. ಯಾಕಂದ್ರೆ ಅವರ ಮನೆಗೆ ದಾಳಿ ಮಾಡಿದಾಗ ಕೋಟ್ಯಾಂತರ ರೂಪಾಯಿ ನಗದು, ಚಿನ್ನಾಭರಣ, ಬೆಳ್ಳಿ ಎಲ್ಲವೂ ಸಿಕ್ಕಿದೆ. ಅಷ್ಟೇ ಅಲ್ಲ ವಿದೇಶದಲ್ಲಿ ವ್ಯವಹಾರ ನಡೆಸಿದ್ದಾರೆ.

ಕ್ಯಾಸಿನೋಗಳು, ಆನ್ಲೈನ್ ಬೆಟ್ಟಿಂಗ್ ಸೈಟ್ ಗಳ ವ್ಯವಹಾರ ನಡೆದಿದೆ. ಕೋಟ್ಯಾಂತರ ರೂ. ಅಕ್ರಮ ವಹಿವಾಟು ನಡೆಸಿದ್ದಾರೆ. ಈ ಬಗ್ಗೆ ವಿಚಾರಣೆ ಅಗತ್ಯ ಇದೆ. ಹೀಗಾಗಿ 14 ದಿನ ವಿಚಾರಣೆ ನಡೆಸಲು ಅವಶ್ಯಕತೆ ಇದೆ ಎಂದು ಇಡಿ ಪರ ವಕೀಲರು ಮನವಿ ಮಾಡಿದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಧೀಶ ಸೈಯದ್ ಬಿ ರೆಹಮಾನ್ ಅವರು, ಆಗಸ್ಟ್​ 28ರ ವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ. ಸದ್ಯ ಶಾಸಕ ವೀರೇಂದ್ರ ಪಪ್ಪಿ ಅವರು ಇಡಿ ವಶದಲ್ಲಿದ್ದು, ಸಿಕ್ಕ ವಸ್ತುಗಳಿಗೆಲ್ಲಾ ದಾಖಲೆ ಸಮೇತ ಉತ್ತರ ಪಡೆಯಲಿದ್ದಾರೆ. ನಾಲ್ಕು ದಿನದ ಬಳಿಕ ಕೋರ್ಟ್ ನಿರ್ಧಾತ ಏನಾಗಿರುತ್ತೆ ಎಂಬುದನ್ನ ನೋಡಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...