Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೆಜಿಎಫ್ ಬಾಂಬೆ ಡಾನ್ ‘ಶೆಟ್ಟಿ’ ದಿನೇಶ್ ಮಂಗಳೂರು ನಿಧನ..!

---Advertisement---

ಬೆಂಗಳೂರು: ರಂಗಭೂಮಿ ನಟ, ಚಿತ್ರ ನಟ, ಕಲಾ ನಿರ್ದೆಶಕ ದಿನೇಶ್ ಮಂಗ್ಳೂರು ಇಂದು ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ ಕುಂದಾಪುರದಲ್ಲಿ ಕೊನೆಯುಸಿರೆಳೆದಿದ್ದಾರೆ. ರಿಕ್ಕಿ, ಉಳಿದವರು ಕಂಡಂತೆ, ಕೆಜಿಎಫ್ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ನಟ, ಎಲ್ಲರ ಮನಸ್ಸನ್ನ ಗೆದ್ದಿದ್ದರು. ಅದರಲ್ಲೂ ಕೆಜಿಎಫ್ ಬಾಂಬೆ ಡಾನ್ ‘ಶೆಟ್ಟಿ’ “ಕೊತ್ವಾಲನ ರೈಟ್ ಹ್ಯಾಂಡ್ ‘ಸೀತಾರಾಮ್ ಶೆಟ್ಟಿ’ ಪಾತ್ರದಲ್ಲಿ ಮಿಂಚಿದ್ದರು. ಕೆಜಿಎಫ್ ಸಿನಿಮಾದಲ್ಲಿ ಸಾಕಷ್ಟು ಖ್ಯಾತಿಯನ್ನ ಪಡೆದಿದ್ದರು.

ದಿನೇಶ್ ಮಂಗಳೂರು ಅವರು ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ದಿನೇಶ್ ಮಂಗಳೂರು ಅವರಿಗೆ ಚಿಕಿತ್ಸೆಯನ್ನು ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ದಿನೇಶ್ ಮಂಗಳೂರು ಅವರ ನಿಧನಕ್ಕೆ ಚಿತ್ರರಂಗದವರು ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬಸ್ಥರು ದುಃಖತಪ್ತರಾಗಿದ್ದಾರೆ.

ಇಂದು ಸಂಜೆ ಪಾರ್ಥಿವ ಶರೀರ ಬೆಂಗಳೂರಿಗೆ ಬರಲಿದ್ದು, ನಾಳೆ ಅಂತ್ಯಸಂಸ್ಕಾರ ನಡೆಯಲಿದೆ. ಸುಮನಹಳ್ಳಿ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಅಂತಿಮ ದರ್ಶನದ ವೇಳೆ ಹಕವು ಗಣ್ಯರು ಅಂತಿಮ ದರ್ಶನ ಪಡೆಯಲಿದ್ದಾರೆ. ಬಳಿಕ ನಾಳೆ ಅಂತ್ಯ ಸಂಸ್ಕಾರ ನಡೆಯಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...