ಬೆಂಗಳೂರು: ಒಂದು ಕಡೆ ಕೊರೊನಾ ನಿಯಂತ್ರಿಸಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಹೊಸ ನಿಯಮವನ್ನ ಜಾರಿಗೆ ತಂದಿದೆ. ಟಫ್ ರೂಲ್ಸ್ ನಲ್ಲಿ ಯಾವುದೇ ಪ್ರತಿಭಟನೆ, ಪಾದಯಾತ್ರೆ ಮಾಡುವ ಆಗಿಲ್ಲ. ಇದೀಗ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಸರ್ಕಾರ ಜನವರಿ 9ಕ್ಕೆ ಪಾದಯಾತ್ರೆ ಕೈಗೊಂಡಿತ್ತು. ಆದ್ರೆ ರಾಜ್ಯ ಸರ್ಕಾರ ಜನವರಿ 6 ರಿಂದಲೇ ಹೊಸ ಮಾರ್ಗಸೂಚಿ ಜಾರಿಗೆ ತಂದಿದೆ. ಹಾಗಾದ್ರೆ ಕಾಂಗ್ರೆಸ್ ಮುಂದೆ ಏನು ಮಾಡುತ್ತೆ ಅನ್ನೋ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಏನೇ ಆಗಲಿ ಪಾದಯಾತ್ರೆ ಮಾಡೇ ಮಾಡ್ತೀವಿ ಅಂತಿದ್ದಾರೆ. ರಾಜ್ಯ ಸರ್ಕಾರ ಏನೇ ಮಾಡಿದರೂ ನಾವೂ ಪಾದಯಾತ್ರೆ ನಿಲ್ಲಿಸಲ್ಲ. ಬೇಕಾದರೆ ಪ್ರಕರಣವನ್ನೇ ದಾಖಲಿಸಲಿ. ಅರೆಸ್ಟ್ ಬೇಕಾದರೂ ಮಾಡಲಿ. ಮೇಕೆದಾಟುಗಾಗಿ ಪಾದಯಾತ್ರೆ ಮಾಡಿಯೇ ಮಾಡ್ತೀವಿ. ಬಿಜೆಪಿಯವರು ಜನಾಶೀರ್ವಾದ ಯಾತ್ರೆ ಮಾಡಬಹುದು ನಾವೂ ನೀರಿಗಾಗಿ ಮೇಕೆದಾಟು ಪಾದಯಾತ್ರೆ ಮಾಡಬಾರಾದಾ ಎಂದು ಪ್ರಶ್ನಿಸಿದ್ದಾರೆ.
ಸರ್ಕಾರ ಕಠಿಣ ರೂಲ್ಸ್ ಮಾಡಿದ್ರು ಕೂಡ ಕಾಂಗ್ರೆಸ್ ನಾಯಕರು ಮಾತ್ರ ಪಾದಯಾತ್ರೆಗೆ ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ. ಡಿಕೆಶಿ ಮೈಸೂರು ಭಾಗದಲ್ಲಿ ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಪಾದಯಾತ್ರೆ ಮಾಡಿಯೇ ಮಾಡ್ತೀವಿ ಅಂತ ಕೈ ನಾಯಕರು ಪಣ ತೊಟ್ಟಿದ್ದಾರೆ.