Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈತರಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್ 01 ರಿಂದ ಪಹಣಿ ತಿದ್ದುಪಡಿಗೆ ವಿಶೇಷ ಅಭಿಯಾನ : ಡಿ.ಸಿ. ವೆಂಕಟೇಶ್  

---Advertisement---

 

ಚಿತ್ರದುರ್ಗ. ಆ.26: ಜಿಲ್ಲೆಯಲ್ಲಿ ಬರುವ ಸೆಪ್ಟಂಬರ್ 01 ರಿಂದ ಹದಿನೈದು ದಿನಗಳ ಕಾಲ ಪಹಣಿಯಲ್ಲಿನ ಸಣ್ಣಪುಟ್ಟ ತಿದ್ದುಪಡಿಗಳನ್ನು ಮಾಡಿಕೊಡಲು ವಿಶೇಷ ಅಭಿಯಾನ ಆರಂಭಿಸಲಾಗುವುದು, ರೈತರು ಕೂಡಲೆ ತಮ್ಮ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ತಹಸಿಲ್ದಾರರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ತಿಳಿಸಿದ್ದಾರೆ.
ಪಹಣಿ, ಆರ್‍ಟಿಸಿ ಯಲ್ಲಿನ ಲೋಪದೋಷಗಳ ತಿದ್ದುಪಡಿ ಅಧಿಕಾರವನ್ನು ಈ ಮೊದಲು ತಹಸಿಲ್ದಾರರಿಗೆ ನೀಡಲಾಗಿತ್ತು.  ಆದರೆ ಇದೀಗ, ಈ ಅಧಿಕಾರವನ್ನು ಉಪವಿಭಾಗಾಧಿಕಾರಿಗಳಿಗೆ ವಹಿಸಲಾಗಿರುತ್ತದೆ.  ಆರ್‍ಟಿಸಿ ಯಲ್ಲಿನ ಸಣ್ಣಪುಟ್ಟ ದೋಷಗಳಿಂದ ರೈತರಿಗೆ ಹಲವು ವಿಧದ ತೊಂದರೆಯಾಗುತ್ತಿದೆ, ಇದನ್ನು ಪರಿಹರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂಬುದಾಗಿ ರೈತ ಮುಖಂಡರುಗಳು ಜಿಲ್ಲಾಡಳಿತದ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಇದೀಗ ರೈತರಿಗೆ ಅನುಕೂಲವಾಗುವಂತಾಗಲು ಸೆಪ್ಟಂಬರ್ 01 ರಿಂದ ಹದಿನೈದು ದಿನಗಳ ಕಾಲ ಜಿಲ್ಲೆಯಾದ್ಯಂತ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಪಹಣಿ ತಿದ್ದುಪಡಿ ಅಭಿಯಾನವನ್ನು ಕೈಗೊಳ್ಳಲಾಗುವುದು.

ಪಹಣಿಯಲ್ಲಿನ ಸಣ್ಣ ಪುಟ್ಟ ದೋಷಗಳನ್ನು ತಿದ್ದುಪಡಿ ಮಾಡಲು (ಅಪೀಲು ಪ್ರಕರಣಗಳನ್ನು ಹೊರತುಪಡಿಸಿ) ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಅರ್ಜಿಗಳನ್ನು ಸಂಬಂಧಿಸಿದ ದಾಖಲೆಗಳೊಂದಿಗೆ ಆಯಾ ತಹಸಿಲ್ದಾರರಿಗೆ ಸಲ್ಲಿಸಬೇಕು.  ತಹಸಿಲ್ದಾರರು ಇಂತಹ ಅರ್ಜಿಗಳನ್ನು ತಮ್ಮ ಹಂತದಲ್ಲಿ ಪರಿಶೀಲಿಸಿ, ಅರ್ಹ ಅರ್ಜಿಗಳ ಪಟ್ಟಿ ಮಾಡಿಕೊಂಡು, ಉಪವಿಭಾಗಾಧಿಕಾರಿಗಳಿಗೆ ಸಲ್ಲಿಸಿದಲ್ಲಿ, ಉಪವಿಭಾಗಾಧಿಕಾರಿಗಳು, ಅರ್ಹ ಅರ್ಜಿಗಳಿಗೆ ಸಂಬಂಧಿಸಿದ ಆರ್‍ಟಿಸಿ ತಿದ್ದುಪಡಿಗೆ ಅನುಮೋದನೆ ನೀಡುವರು. ರೈತರು ಈ ವಿಶೇಷ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...