ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 29 : ಇಲ್ಲಿನ ರಾಜೇಂದ್ರ ನಗರದ ನಿವೃತ್ತ ಶಿಕ್ಷಕಿ ಮಹಾದೇವಮ್ಮ (91) ಶುಕ್ರವಾರ ವಯೋಸಹಜ ಕಾಯಿಲೆಯಿಂದ ನಿಧನರಾದರು.
ಮೃತರು ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಶನಿವಾರ ಮಧ್ಯಾಹ್ನ ಜೋಗಿಹಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಾಜಿ ಸಚಿವ ಎಚ್.ಆಂಜನೇಯ ಮೃತರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.






