Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ, ದಾವಣಗೆರೆ, ತುಮಕೂರು ಸೇರಿದಂತೆ ಹಲವೆಡೆ ಸೆ.6ರವರೆಗೆ ಮಳೆ

---Advertisement---

ಬೆಂಗಳೂರು: ರಾಜ್ಯಾದ್ಯಂತ ಮಳೆ ಜೋರಾಗಿದೆ. ದಿನವೂ ಬಿಡದೆ ಹಲವೆಡೆ ಮಳೆ ಸುರಿಯುತ್ತಿದೆ. ಇನ್ನು ಸೆಪ್ಟೆಂಬರ್ 6ರವರೆಗೂ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಒಂದು ವಾರಗಳ ಕಾಲ ಮಳೆಯಾಗಲಿದ್ದು, ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ತುಮಕೂರಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ‌ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಭಾಗದಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯಿಂದಾನೂ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿದೆ. ಸಂಜೆ ವೇಳೆಗೆ ಸಾಧಾರಣ‌ ಮಳೆಯಾಗುವ ಸೂಚನೆ ನೀಡಿದೆ ಹವಮಾನ ಇಲಾಖೆ. ಮುಂದಿನ ಒಂದು ವಾರಗಳ ಕಾಲ ಜೋರು ಮಳೆಯಾಗಲಿದೆ. ಸದ್ಯ ಈ ಮಳೆಯ ಸೂಚನೆ ರೈತರಿಗೆ ಸಂತಸ ತಂದಿದೆ. ಬೆಳೆಗೆ ಬೇಕಾದ ಮಳೆ ಈ ಸಮಯಕ್ಕೆ ಬಂದರೆ ಉತ್ತಮ ಫಸಲು ಸಿಗಲಿದೆ.

ಇನ್ನು ಪ್ರತಿದಿನ ಮಳೆ ಬೀಳುತ್ತಿರುವ ಕಾರಣ ರಾಜ್ಯದ ಜಲಾಶಯಗಳಲ್ಲೂ ನೀರಿನ ಒಳ ಹರಿವು ಹೆಚ್ಚಾಗಿದೆ. ಹೀಗೆ ಪ್ರತಿದಿನವೂ ಮಳೆ‌ಬಂದರೆ ಕೆರೆ, ಕಟ್ಟೆಗಳು, ಜಲಾಶಯಗಳು ಕೋಡಿ ಬೀಳುವುದು ಗ್ಯಾರಂಟಿ. ಸದ್ಯ ಸೆಪ್ಟೆಂಬರ್ 6ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ವರದಿ‌ ನೀಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment