Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಂದಿನ ಆರು ತಿಂಗಳೊಳಗೆ ಶಾಸಕ ಎನ್. ವೈ. ಗೋಪಾಕೃಷ್ಣ ಮಂತ್ರಿಯಾಗ್ತಾರೆ : ಶರಣ ಬಸವ ಮಹಾಸ್ವಾಮಿಜಿ

---Advertisement---

ವರದಿ ಮತ್ತು ಫೋಟೋ ಕೃಪೆ
ಹೆಚ್. ಮಹಾಂತೇಶ್, ರಾಯಾಪುರ, ಮೊಳಕಾಲ್ಮೂರು.
ಮೊ : 93806 27082

ಸುದ್ದಿಒನ್, ಮೊಳಕಾಲ್ಮುರು, ಸೆಪ್ಟೆಂಬರ್. 01 : ಮುಂಬರುವ ಆರು ತಿಂಗಳ ಒಳಗಾಗಿ ಶಾಸಕ ಎನ್ ವೈ ಗೋಪಾಲಕೃಷ್ಣ ಮಂತ್ರಿಯಾಗ್ತಾರೆ ಎಂದು ವಿಶ್ವ ಕಾಲಜ್ಞಾನ ಶಿವಯೋಗಿ ಡಾ. ಶ್ರೀ ಶರಣಬಸವ ಮಹಾಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.

ಗಜೇಂದ್ರಗಡದ ಕೋಡಿಮಠ ತಳ್ಳಿಯಾಳ ಸಂಸ್ಥಾನದ ವಿಶ್ವಕಾಲಜ್ಞಾನ ಶಿವಯೋಗಿ ಡಾ. ಶ್ರೀ ಶರಣಬಸವ ಮಹಾಸ್ವಾಮಿಗಳು ಪಟ್ಟಣದಲ್ಲಿ ಸೋಮವಾರ ಮಧ್ಯಾಹ್ನ 12ಗಂಟೆಗೆ ಶಾಸಕ ಎನ್ ವೈ ಗೋಪಾಲಕೃಷ್ಣ ಸಚಿವ ಸ್ಥಾನದ ಕುರಿತಾಗಿ ಭವಿಷ್ಯ ನುಡಿದಿದ್ದಾರೆ.

ಸೇವಾ ಪ್ರವೃತ್ತಿ ಇರುವಂತ ಮನುಷ್ಯ ಸನ್ಮಾರ್ಗದಿಂದ ಬಂದಿದ್ದಾರೆ. ಮುಂದಿನ ಆರು ತಿಂಗಳ ಒಳಗಾಗಿ ರಾಜ್ಯ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್ ರಚನೆ ಆಗಲಿದ್ದು ಅಂದಿನ ಸಂದರ್ಭದಲ್ಲಿ ಹಿರಿಯ ಶಾಸಕ ಎನ್. ವೈ. ಗೋಪಾಲಕೃಷ್ಣ ಮಂತ್ರಿ ಆಗ್ತಾರೆ. ಮೊಳಕಾಲ್ಮೂರು ಕ್ಷೇತ್ರ ಮುಂದಿನ ದಿನಗಳಲ್ಲಿ ಸುಭಿಕ್ಷವಾಗಲಿದೆ. ಸರಳ ಸಜ್ಜನಿಕೆಯ ವ್ಯಕ್ತಿಗಳು ಮಾತ್ರ ಇಲ್ಲಿ ಆಳ್ವಿಕೆ ನಡೆಸುತ್ತಾರೆ. ಕಾಡುವ ಪ್ರಾಣಿಗಳು ಕಾಡಿನಲ್ಲಿ ಇದ್ದರೆ ಕಾಡುವ ಪ್ರಾಣಿಗಳು ಊರಿನಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವು ಸರಿ ಹೋಗಲಿದೆ. ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ವಸಂತ ಗಾಳಿ ಬೀಸುತ್ತದೆ. ಮುಂದಿನ ಆರು ತಿಂಗಳ ಒಳಗಾಗಿ ಖಂಡಿತ ಶಾಸಕ ಎನ್ ವೈ ಗೋಪಾಲಕೃಷ್ಣ ಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನಡೆದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment