Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಗ್ರಾ.ಪಂ.ನಲ್ಲಿ ಅವ್ಯವಹಾರ : ತನಿಖೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 01 : ಗ್ರಾಮ ಪಂಚಾಯಿತಿಗಳಲ್ಲಿ ಅವ್ಯವಹಾರ ನಡೆದಿದ್ದು, ಗ್ರಾಮ ಪಂಚಾಯಿತಿಯ ಜಾಗಗಳನ್ನು ಮಾಜಿ ಸದಸ್ಯರುಗಳಿಗೆ ಖಾತೆ ಮಾಡಿಕೊಟ್ಟ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್ ಉಪವಾಸ ಸತ್ಯಾಗ್ರಹ ನಡೆಸಿದರು.

ಹಿರೇಗುಂಟೂರು ಗ್ರಾಮ ಪಂಚಾಯಿತಿಯಲ್ಲಿ ಸುಮಾರು 12 ವರ್ಷಗಳಿಂದ ಗ್ರಾಮ ಪಂಚಾಯತಿಗಳಿಗೆ ಸಂಬಂಧಪಟ್ಟ ಜಾಗಗಳಲ್ಲಿ ಅವ್ಯವಾರ ನಡೆದಿದೆ. ಅಧಿಕಾರಿಗಳು ಈ ಸ್ವತ್ತು ಮಾಡಿಕೊಡುತ್ತಿಲ್ಲ. ಗ್ರಾಮಸ್ಥರು ದಿನನಿತ್ಯ ಈ ಸ್ವತ್ತಿಗೆ ಗ್ರಾಮ ಪಂಚಾಯಿತಿಗೆ ಅಲೆದಾಡೋ ಪರಿಸ್ಥಿತಿ ಬಂದಿದೆ. ಗ್ರಾಮ ಪಂಚಾಯಿತಿಯಲ್ಲಿ ಸಾರ್ವಜನಿಕರ ಆವಾಲು ಸ್ವೀಕರಿಸಲು ಯಾವುದೇ ಅಧಿಕಾರಿಗಳು ಇರುವುದಿಲ್ಲ ಎಂದು ದೂರಿದರು.

ಖಾದಿ ಗ್ರಾಮೋದ್ಯೋಗ ಜಾಗ ಬೇರೆಯವರಿಗೆ ವರ್ಗಾವಣೆ ಮಾಡಿದ್ದು ಅದು ಕೂಡ ದಾಖಲೆ ಸಿಕ್ಕಿದೆ. ಗ್ರಾಮದಲ್ಲಿರುವ ಎಸಿ ಕಾಲೋನಿಯ ಹಳೇಬಾವಿ ಜಾಗವನ್ನು ಬೇರೆಯವರಿಗೆ ವರ್ಗಾವಣೆ ಮಾಡಿದ್ದಾರೆ. ಬಸ್ ಸ್ಟಾಂಡ್ ಸಮೀಪವಿರುವ ಐದಾರು ಸೈಟುಗಳು ಸುಮಾರು ಒಂದು ಕೋಟಿಯಷ್ಟು ಬೆಲೆಬಾಳುತ್ತವೆ. ಅದು ಕೂಡ ಬೇರೆಯವರ ಹೆಸರಿಗೆ ವರ್ಗಾವಣೆ ಆಗಿದೆ. ನಮ್ಮ ಗ್ರಾಮದಲ್ಲಿ ಪವರ್ ಸ್ಟೇಷನ್ ಇದ್ದು ಸುಮಾರು ಐದು ವರ್ಷಗಳಿಂದ ಅವರು ಕಟ್ಟಿರುವ ಕಂದಾಯದ ಹಣ ಕೂಡ ಎಲ್ಲಿ ಹೋಗದೆ ಎಂದು ತಿಳಿದು ಬಂದಿಲ್ಲ. ಇದನ್ನೆಲ್ಲಾ ತಿಳಿದು ನಾನು ಜಿಲ್ಲಾಧಿಕಾರಿಗಳನ್ನು ಹಾಗೂ ಜಿಲ್ಲಾ ಪಂಚಾಯಿತಿ ಸಿಇಓ ಅವರಿಗೂ ಮನವಿ ಪತ್ರ ಸಲ್ಲಿಸಿದ್ದೇನೆ. ಆದರೆ ಯಾರೂ ಕೂಡ ಇದರ ಬಗ್ಗೆ ತನಿಖೆಗೆ ಆಗ್ರಹಿಸಿಲ್ಲ. ಇದರಿಂದ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದ್ದು ಇದನ್ನು ಆದಷ್ಟು ಬೇಗ ಸರಿಪಡಿಸಬೇಕು ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು.

ಸಮಸ್ಯೆಯನ್ನು ತಿಳಿಗೊಳಿಸಲು ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯಿತಿ ಇ. ಒ. ರವಿಕುಮಾರ್ ಮಾತನಾಡಿ,ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್ ಅವರು ಸತ್ಯಾಗ್ರಹ ಕುಳಿತಿದ್ದನ್ನು ತಿಳಿದು ಆಗಮಿಸಿದ್ದೇವೆ. ಗ್ರಾಮ ಪಂಚಾಯತಿಯಲ್ಲಿ ದುರ್ಬಳಕೆಯಾಗಿದೆ ಎಂದು ಗ್ರಾಮ ಪಂಚಾಯಿತಿ ಹಾಲಿ ಸದಸ್ಯರು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಇದರ ಬಗ್ಗೆ ಆದಷ್ಟು ಬೇಗ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಇದರ ಬಗ್ಗೆ ತನಿಖೆ ಆಗುವಂತೆ ಮಾಡುತ್ತೇವೆಂದು ಹೇಳಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...