ಬೆಂಗಳೂರು: ಕೊರೊನಾ ಹೆಚ್ಚಳದ ಹಿನ್ನೆಲೆ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಯಾಗಿದೆ. ಆದ್ರೆ ಇದು ಕಾಂಗ್ರೆಸ್ ಪಾದಯಾತ್ರೆ ತಪ್ಪಿಸಲು ಹಾಕಿದ ನಿಯಮ ಎಂಬ ಆರೋಪ ಕೇಳಿ ಬರುತ್ತಿದೆ. ಈ ಬೆನ್ನಲ್ಲೆ ಸಿದ್ದರಾಮಯ್ಯ ಸಿಡಿದೆದ್ದಿದ್ದು, ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ.
ನಾವು ಪಾದಯಾತ್ರೆ ಘೋಷಣೆ ಮಾಡಿದ್ದು ಸರ್ಕಾರ ಕೊವಿಡ್ ನಿರ್ಬಂಧಗಳನ್ನು ಹೇರಿದ ಮೇಲಲ್ಲ. ತಿಂಗಳ ಮೊದಲೇ ದಿನಾಂಕ ನಿಗದಿ ಮಾಡಿ, ಅಗತ್ಯ ತಯಾರಿ ಮಾಡಿಕೊಂಡಿದ್ದೇವೆ. ನಮ್ಮನ್ನೇ ಗುರಿಮಾಡಿ ನಿಯಮ ಹೇರಿದರೆ ನಾವು ಹೆದರಿ ಪಾದಯಾತ್ರೆ ಕೈಬಿಡೋಕಾಗುತ್ತಾ?.
144 ಸೆಕ್ಷನ್ ಹೇರಿದರೆ ಐದಕ್ಕಿಂತ ಹೆಚ್ಚು ಮಂದಿ ಸೇರಬಾರದು ಎಂದಿದೆಯಲ್ವಾ? ನಾನು, @DKShivakumar, @RLR_BTM, ಧ್ರುವನಾರಾಯಣ ಸೇರಿ ನಾಲ್ಕೇ ಮಂದಿ ನಡೆದುಕೊಂಡು ಹೋಗ್ತೇವೆ. ಆಗಲೂ ನಮ್ಮನ್ನು ತಡೆಯುತ್ತಾರಾ? ಬಲಪ್ರಯೋಗ ಮಾಡಿದರೆ ನಮ್ಮ ಸಂವಿಧಾನದತ್ತ ಹಕ್ಕುಗಳನ್ನು ಉಲ್ಲಂಘನೆ ಮಾಡಿದ ಹಾಗಾಗುವುದಿಲ್ಲವೇ?.
ಕೊರೊನಾ ಮೂರನೇ ಅಲೆಯ ನಿರೀಕ್ಷೆ ಇದ್ದರೂ ಸರಿಯಾದ ತಪಾಸಣೆ ನಡೆಸದೆ, ಅಂತರರಾಷ್ಟ್ರೀಯ ವಿಮಾನ ಸಂಚಾರ ತಡೆಯದೆ, ಮಾಸ್ಕ್ ಬಳಕೆ ಕಟ್ಟುನಿಟ್ಟು ಮಾಡದೆ ಈಗ ವಿರೋಧ ಪಕ್ಷವೊಂದು ತನ್ನ ಜವಾಬ್ದಾರಿ ನಿರ್ವಹಿಸಲು ಹೊರಟಾಗ ದುರುದ್ದೇಶದಿಂದ ನಿರ್ಬಂಧಗಳನ್ನು ಹೇರಿರುವುದು ಖಂಡನೀಯ.
ರಾಜ್ಯದ ಯಾವೊಬ್ಬ ವ್ಯಕ್ತಿಗೂ ಕೊರೊನಾ ಬರಬಾರದು ಎಂಬುದು ನಮ್ಮ ಆಶಯವೂ ಹೌದು. ಆದರೆ @BJP4Karnataka ಸರ್ಕಾರ ನಿಬಂಧನೆಗಳನ್ನು ಹೇರಿರುವ ಹಿಂದೆ ಬೇರೆಯೇ ಉದ್ದೇಶ ಇದೆ. ಅವರ ಈ ಷಡ್ಯಂತ್ರವನ್ನು ಬಯಲು ಮಾಡುತ್ತೇವೆ ಎಂದು ಸರಣಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.