Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ ಜೈಲಿಂದ ಬೇಗ ಬರ್ತಾರೆ : ಜೋಗಿ ಪ್ರೇಮ್ ಹೇಳಿದ್ದೇನು..?

---Advertisement---

 

ಬೆಂಗಳೂರು: ನಟಿ ರಕ್ಷಿತಾ ಹಾಗೂ ದರ್ಶನ್ ಆತ್ಮೀಯ ಸ್ನೇಹಿತರು ಅನ್ನೋದು ಎಲ್ಲರಿಗೂ ಗೊತ್ತು. ಪ್ರೇಮ್ ನಿರ್ದೇಶನದಲ್ಲಿ ದರ್ಶನ್ ಗೂ ಒಂದು ಸಿನಿಮಾ ರೆಡಿಯಾಗ್ತಾ ಇತ್ತು. ಆದರೆ ಅಷ್ಟೊತ್ತಿಗೆ ಅಚಾತುರ್ಯ ನಡೆದು ಹೋಯ್ತು. ಸದ್ಯ ಪ್ರೇಮ್ ಕೆಡಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆಯೇ ದರ್ಶನ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಒಬ್ಬರು ನೋವಲ್ಲಿ ಇರುವಾಗ ಏನೇನೋ ಮಾತನಾಡಬಾರದು. ದರ್ಶನ್ ಆದಷ್ಟು ಬೇಗ ಹೊರಗೆ ಬರ್ತಾರೆ. ದರ್ಶನ್ ಹೊರಗೆ ಬಂದ ತಕ್ಷಣ ನಾನೇ ಸಿನಿಮಾ ಮಾಡ್ತೀನಿ. ದರ್ಶನ್ ಅವರು ಜೈಲಿಗೆ ಹೋಗುವುದಕ್ಕೂ ಎರಡು ದಿನದ ಹಿಂದಷ್ಟೇ ಭೇಟಿ ಮಾಡಿದ್ದೆ. ಆದ್ರೆ ಅದು ಕ್ಯಾಶುವಲ್ ಭೇಟಿಯಾಗಿತ್ತು ಅಷ್ಟೇ. ದರ್ಶನ್ ಜೈಲಿಂದ ಹೊರಗೆ ಬಂದ ಮೇಲೆ ನಾನು ಸಿನಿಮಾ ಮಾಡ್ತೀನಿ ಅಂತ ಹೇಳಿದ್ದಾರೆ. ಪ್ರೇಮ್ ಹಾಗೂ ದರ್ಶನ್ ಕಾಂಬಿನೇಷನ್ ಸಿನಿಮಾಗಾಗಿಯೂ ಅಭಿಮಾನಿಗಳು ಕಾಯ್ತಾ ಇದ್ದಾರೆ.

ಸದ್ಯ ದರ್ಶನ್ ಅವರ ಡೆವಿಲ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಡಿಸೆಂಬರ್ 12ಕ್ಕೆ ರಿಲೀಸ್ ಆಗಲಿದೆ. ಈ ಸಂತಸದ ಸಮಯದಲ್ಲಿ ದರ್ಶನ್, ರೇಣುಕಾಸ್ವಾಮಿ‌ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರದಲ್ಲಿಯೇ ಇದ್ದಾರೆ. ಈ ಮೊದಲು ಬಳ್ಳಾರಿ ಜೈಲಿನಲ್ಲಿದ್ದರು. ಹೀಗಾಗಿ ಮತ್ತೆ ಅವರನ್ನು ಬಳ್ಳಾರಿ ಜೈಲಿಗೆ ಕಳುಹಿಸುವಂತೆ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್ ತೀರ್ಪು ಕಾಯ್ದಿರಿಸಿದೆ. ದರ್ಶನ್ ಅವರು ಬಳ್ಳಾರಿ ಜೈಲಿಗೆ ಶಿಫ್ಟ್ ಆದ್ರೆ ಕುಟುಂಬಸ್ಥರಿಗೂ ಕಷ್ಟವಾಗುತ್ತದೆ. ಹೋಗಿ ಬರುವುದಕ್ಕೇನೆ ಸಮಯ ಬೇಕಾಗುತ್ತದೆ. ಹೀಗಾಗಿ ಸಾಧ್ಯವಾದಷ್ಟು ಬೆಂಗಳೂರಿನಲ್ಲಿಯೇ ಇರಿಸಿಕೊಳ್ಳುವಂತೆ ವಕೀಲರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...