Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮುಂದಿನ ನಾಲ್ಕು ದಿನಗಳ ಕಾಲ ಜೋರು ಮಳೆ : ಹವಮಾನ ವರದಿ

---Advertisement---

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಜೋರು ಮಳೆಯಾಗುತ್ತಿದೆ. ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಅಂತಾನೇ ಹವಮಾನ ಇಲಾಖೆ ವರದಿ ನೀಡಿದೆ. ಇಂದು ಸಹ ನಾನಾ ಭಾಗದಲ್ಲಿ ಮಳೆಯಾಗಲಿದೆ ಎಂದು ವರದಿ ನೀಡಿದೆ. ಮಧ್ಯಾಹ್ನದ ವೇಳೆಗೆ ಅದಾಗಲೇ ಜೋರು ಮಳೆಯಾಗಿದ್ದು, ಬಂದು ನಿಂತಿದೆ. ಮಧ್ಯಾಹ್ನದ ವೇಳೆಗೆ ಮಳೆ ಬಂದ ಕಾರಣ, ಕಚೇರಿಗೆ ಹೋಗುವವರು, ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದರು.

ಸೆಪ್ಟೆಂಬರ್ 7ರವರೆಗೂ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ ಪ್ರದೇಶಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಲಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.‌ ಸೈಕ್ಲೋನ್ ಎಫೆಕ್ಟ್ ನಿಂದಾಗಿ ಮಳೆ ಬರ್ತಾ ಇದೆ. ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಸಮಸ್ಯೆಗಳು ಆಗಿವೆ. ಇಂದು ಸುರಿದ ಮಳೆಯಿಂದಾಗಿ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಕಷ್ಟು ಮುಂಜಾಗ್ರತ ಕ್ರಮವನ್ನ ವಹಿಸಲಾಗಿದೆ. ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಕೆಲ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆಯ ಕಾರಣ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದಾಗಿ ಮಕ್ಕಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂದಿನ ಒಂದು ವಾರಗಳ ಕಾಲ ಮಳೆಯಾಗುವ ವರದಿಯನ್ನ ಹವಮಾನ ಇಲಾಖೆ ಸೂಚನೆ ನೀಡಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...