Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಪರಿಹರಿಸಿ : ಎಐಡಿಎಸ್‍ಓ ಆಗ್ರಹ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ ಸೆ. 03 : ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಪರಿಹರಿಸಲು ಆಗ್ರಹಿಸಿ ಎಐಡಿಎಸ್‍ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.

ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲಗಳನ್ನು ನಿವಾರಿಸಲು ಆಗ್ರಹಿಸಿ ಇಂದು ಎಐಡಿ ಎಸ್‍ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಡಿ.ಸಿ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.

ಎಐಡಿಎಸ್‍ಓ ರಾಜ್ಯ ಕಛೇರಿ ಕಾರ್ಯದರ್ಶಿ ಮಹಾಂತೇಶ್ ಬಿಳೂರು ಮಾತನಾಡಿ, “ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಸೆಪ್ಟೆಂಬರ್‍ನಲ್ಲಿ ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆ ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟಿನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ. ಖಾಸಗಿ ಕಾಲೇಜುಗಳಲ್ಲಿ ಪಾಠಗಳು ನಡೆಯುತ್ತಿದ್ದರೆ, ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಮಾತ್ರ ದಿನವೂ ಕಾಲೇಜಿಗೆ ಬಂದು ತರಗತಿಗಳು ನಡೆಯದೇ ಮನೆಗಳಿಗೆ ಹಿಂದಿರುಗುವಂತಾಗಿದೆ. ಈ ಮೂಲಕ ಸರ್ಕಾರವು ಬಡವಿದ್ಯಾರ್ಥಿಗಳಿಗೆ ಅನ್ಯಾಯವೆಸಗುತ್ತಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ, ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಎಐಡಿಎಸ್‍ಓ ಜಿಲ್ಲಾ ಸಂಚಾಲಕ ಕೆ ಈರಣ್ಣ ಮತ್ತು ವಿದ್ಯಾರ್ಥಿಗಳು ಗಜೇಂದ್ರ , ಮೌನೇಶ್, ಸ್ವಪ್ನ, ಸಾನಿಯಾ, ಭಾರ್ಗವಿ, ದ್ಯಾನೇಶ್ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment