ಧರ್ಮಸ್ಥಳ ಪ್ರಕರಣ: ಪಂಚಮಸಾಲಿ ಸ್ವಾಮೀಜಿ ಸೇರಿದಂತೆ ಕೆಲ ಸ್ವಾಮೀಜಿಗಳಿಗೆ ಅಮಿತ್ ಶಾ ಕೊಟ್ಟ ಸೂಚನೆ ಏನು..?

1 Min Read

ಬೆಂಗಳೂರು: ಧರ್ಮಸ್ಥಳದಲ್ಲಿ ಕೆಲ ದಿನಗಳಿಂದ ಏನೆಲ್ಲಾ ನಡೆಯುತ್ತಿದೆ ಅಂತ ರಾಜ್ಯ ಮಾತ್ರವಲ್ಲ ರಾಷ್ಟ್ರ ಮಟ್ಟದಲ್ಲೂ ಸುದ್ದಿ ಮಾಡಿದಂತ ವಿಚಾರವಿದು. ಸದ್ಯ ಮಾಸ್ಕ್ ಮ್ಯಾನ್ ಚಿನ್ನಯ್ಯ ಎಸ್ಐಟಿ ವಶದಲ್ಲಿದ್ದು, ಎಸ್ಐಟಿ ಅಧಿಕಾರಿಗಳು ವಿಚಾರಣೆಯನ್ನ ನಡೆಸುತ್ತಿದ್ದಾರೆ. ಇದರ ನಡುವೆ ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ನೇತೃತ್ವದ ಸನಾತನ ಸಂತ ನಿಯೋಗ ನವದೆಹಲಿಯಲ್ಲಿ ಕೇಂದ್ರ ಗೃಹ ಸಚುವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಈ ಕೇಸನ್ನ ಎನ್ಐಎ ತನಿಖೆಗೆ ವಹಿಸುವಂತೆ ಮನವಿಯನ್ನು ಸಲ್ಲಿಸಿದೆ.

ಈ ವೇಳೆ ಅಮಿತ್ ಅವರು ಕೂಡ ಸ್ವಾಮೀಜಿಗಳಿಗೆ ಭರವಸೆ ನೀಡಿ ಕಳುಹಿಸಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪುಟ ಸಭೆಯನ್ನು ನಡೆಸಲಿದೆ. ಧರ್ಮ ಕ್ಷೇತ್ರಗಳ ವಿರುದ್ಧ ಅಫ್ರಚಾರಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತೇವೆ. ನೀವೂ ಸಮಾಜವನ್ನು ಜಾಗೃತಗೊಳಿಸಿ ಎಂದು ಸ್ವಾಮೀಜಿಗಳಿಗೆ ಎಚ್ಚರಿಕೆಯನ್ನು ನೀಡಿದ್ದಾರೆ ಎನ್ನಲಾಗಿದೆ.

ಇನ್ನು ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಎಸ್ಐಟಿ ಕೂಡ ತೀವ್ರ ತನಿಖೆಯನ್ನ ನಡೆಸುತ್ತಿದೆ. ಈಗಾಗಲೇ ಯೂಟ್ಯೂಬರ್ ಅಭಿಷೇಕ್ ನನ್ನು ವಿಚಾರಣೆ ನಡೆಸಿದ್ದು, ಆತ ಎಸ್ಐಟಿ ಮುಂದೆ ಒಂದಷ್ಟು ವಿಚಾರಗಳನ್ನು ತಿಳಿಸಿದ್ದಾನೆ ಎನ್ನಲಾಗಿದೆ. ಆರು ತಿಂಗಳ ಹಿಂದೆ ಗಿರೀಶ್ ಮಟ್ಟಣ್ಣನವರ್ ಅವರನ್ನು ಸಂಪರ್ಕ ಮಾಡಿದ್ದೆ. ಲೈಕ್ಸಗ ಹಾಗೂ ವೀವ್ಸ್ ಗಾಗಿ ವಿಡಿಯೋ ಮಾಡಿದ್ದೆ ಎಂಬ ವಿಚಾರವನ್ನ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಒಟ್ಟಾರೆ ಎಸ್ಐಟಿ ತಂಡ ಧರ್ಮಸ್ಥಳ ಬುರುಡೆ ಕೇಸ್ ಗೆ ಸಂಬಂಧಿಸಿದಂತೆ ಎಲ್ಲಾ ರೀತಿಯಾದಂತ ತನಿಖೆಯನ್ನ ನಡೆಸುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *