Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಗಣೇಶ ಮತ್ತು ಈದ್ ಮಿಲಾದ್ ಹಬ್ಬ : ಮದ್ಯ ಮಾರಾಟ ಮತ್ತು ಪಟಾಕಿ ನಿಷೇಧ

---Advertisement---

 

 

ಚಿತ್ರದುರ್ಗ. ಸೆ.04: ಈದ್ ಮಿಲಾದ್ ಹಬ್ಬ ಹಾಗೂ ಹಿಂದೂ ಮಹಾ ಗಣಪತಿ ವಿಸರ್ಜನೆ ಮೆರವಣಿಗೆ ಹಿನ್ನಲೆಯಲ್ಲಿ, ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ವಿವಿಧ ದಿನಗಳಂದು ಬೆಳಿಗ್ಗೆ 06 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಹಲವೆಡೆ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

ಸೆ.5 ರಂದು ಬೆ. 06 ರಿಂದ ಮಧ್ಯರಾತ್ರಿ 12 ರವರೆಗೆ ಈದ್ ಮಿಲಾದ್ ಹಬ್ಬ ಪ್ರಯುಕ್ತ ಚಿತ್ರದುರ್ಗ ನಗರ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಉಳಿದಂತೆ ಜಿಲ್ಲೆಯ ವಿವಿಧ ಪ್ರದೇಶದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದು ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಸಂಬಂಧ, ಸೆ.6 ರಂದು ಚಳ್ಳಕೆರೆ ನಗರ ಮತ್ತು ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ.  ಸೆ.7 ರಂದು ಮೊಳಕಾಲ್ಮೂರು ಹಾಗೂ ಹೊಳಲ್ಕೆರೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ. ಸೆ.8 ರಂದು ಹೊಸದುರ್ಗ ಪಟ್ಟಣ ಹಾಗೂ ಭರಮಸಾಗರ ಗ್ರಾಮ ಸೇರಿದಂತೆ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ, ಹಾಗೂ ಚಿತ್ರದುರ್ಗ ನಗರದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಸಂಬಂಧ ಸೆ.12 ರ  ಬೆಳಿಗ್ಗೆ 06 ರಿಂದ ಸೆ. 13 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮಧ್ಯ ಮಾರಾಟ ನಿಷೇಧಿಸಲಾಗಿದೆ.

ಸದರಿ ದಿನಗಳಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಆಯಾ ಪ್ರದೇಶದ ವ್ಯಾಪ್ತಿಗೆ ಅನುಗುಣವಾಗಿ ಮದ್ಯದ ಅಂಗಡಿಗಳನ್ನು ತೆರೆಯುವಂತಿಲ್ಲ ಮದ್ಯ ಮಾರಾಟ ಮಾಡುವಂತಿಲ್ಲ. ಆದೇಶ ಉಲ್ಲಂಘಿಸಿದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

 

ಗಣೇಶ ಮತ್ತು ಈದ್ ಮಿಲಾದ್ ಹಬ್ಬ: ಪಟಾಕಿ ನಿಷೇಧ

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಪೂರ್ಣಗೊಳ್ಳುವವರೆಗೂ ಜಿಲ್ಲೆಯಾದ್ಯಂತ ಎಲ್ಲ ತರಹದ ಕಲರ್  ಪೇಪರ್ ಬ್ಲಾಸ್ಟಿಂಗ್, ಪಟಾಕಿ, ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಆಗಸ್ಟ್ 27ರಂದು ಹಿಂದೂ ಬಾಂಧವರು ಒಟ್ಟು 1,744 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ವಿವಿಧ ದಿನಾಂಕಗಳಂದು ವಿಸರ್ಜನೆ  ಮಾಡಲಿದ್ದಾರೆ.  ಸೆ.15 ರವರೆಗೆ ಒಟ್ಟು 20 ದಿನಗಳ ಕಾಲ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಮೆರವಣಿಗೆ ಮೂಲಕ ವಿಸರ್ಜನೆ ನಡೆಸಲಿದ್ದಾರೆ ಹಾಗೂ ಸೆ.05 ರಂದು ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು “ಈದ್  ಮಿಲಾದ್” ಹಬ್ಬವನ್ನು ಆಚರಿಸಲಿದ್ದಾರೆ. ಈ ಸಮಯದಲ್ಲಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ, ಮೆರವಣಿಗೆ ಸಂದರ್ಭದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ, ಸಿಡಿಮದ್ದುಗಳನ್ನು ಸಿಡಿಸುವುದರಿಂದ ಅನ್ಯಕೋಮಿನವರ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡುವ, ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ಸೆ.15 ರವರೆಗೆ ಜಿಲ್ಲೆಯಾದ್ಯಂತ ಎಲ್ಲ ರೀತಿಯ ಕಲರ್ ಪೇಪರ್ ಬ್ಲಾಸ್ಟರ್, ಪಟಾಕಿ, ಸಿಡಿಮದ್ದು ಸಿಡಿಸುವುದನ್ನು ನಿಷೇಧಗೊಳಿಸಿ ಆದೇಶ ಹೊರಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು ಕೋರಿರುತ್ತಾರೆ.
ಹೀಗಾಗಿ ಸೆ. 15 ರವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯಲಿರುವ ಗಣಪತಿಯ ಶೋಭಯಾತ್ರೆ ಹಾಗೂ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಹಾಗೂ ಸೆ. 05 ರ ಈದ್ ಮಿಲಾದ್ ಹಬ್ಬದ ಸಮಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಂಡು ಕೋಮು ಸೌಹಾರ್ಧತೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಚಿತ್ರದುರ್ಗ ಜಿಲ್ಲೆಯಾದ್ಯಂತ ಎಲ್ಲ ರೀತಿಯ ಕಲರ್ ಪೇಪರ್ ಬ್ಲಾಸ್ಟರ್, ಪಟಾಕಿ, ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶದಲ್ಲಿ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment