Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹೊಳಲ್ಕೆರೆಯಲ್ಲಿ ಸೆ.7ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ವಾಹನಗಳ ಸಂಚಾರ ಮಾರ್ಗ ಬದಲಾವಣೆ

---Advertisement---

 

ಚಿತ್ರದುರ್ಗ.ಸೆ.04: ಹೊಳಲ್ಕೆರೆ ಪಟ್ಟಣದಲ್ಲಿ ಇದೇ ಸೆಪ್ಟೆಂಬರ್ 7 ರಂದು ವಿಶ್ವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಶೋಭಾಯಾತ್ರೆ ನೆರವೇರಲಿದ್ದು, ಹೀಗಾಗಿ ಹೊಳಲ್ಕೆರೆ ಪಟ್ಟಣದಲ್ಲಿ ಕೆಲ ಮಾರ್ಗದಲ್ಲಿ ಸಂಚಾರ ನಿಷೇಧ ಮತ್ತು ವಾಹನಗಳ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ. ವೆಂಕಟೇಶ್ ಅವರು ಆದೇಶ ಹೊರಡಿಸಿದ್ದಾರೆ.
ಹೊಳಲ್ಕೆರೆ ಪಟ್ಟಣದ ವಿಶ್ವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಸುಮಾರು 18 ರಿಂದ 20 ಸಾವಿರ ಭಕ್ತಾಧಿಗಳು ಭಾಗವಹಿಸುವುದರಿಂದ ರಾಷ್ಟ್ರೀಯ ಹೆದ್ದಾರಿ 369ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗದಂತೆ ಸಾರ್ವಜನಿಕ ಸಂಚಾರ ಕ್ರಮಗೊಳಿಸುವ ದೃಷ್ಠಿಯಿಂದ ಸೆ.7ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ರವರೆಗೆ ಹೊಳಲ್ಕೆರೆ ಪಟ್ಟಣದ ಮುಖ್ಯ ರಸ್ತೆ ಮತ್ತು ಇತರೆ ರಸ್ತೆಗಳಲ್ಲಿ ಸಂಚರಿಸಲಿರುವ ವಾಹನಗಳ ಸಂಚಾರ ನಿಷೇಧಿಸಿ, ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಆದೇಶಿಸಲಾಗಿದೆ.

ಸಂಚಾರ ನಿಷೇಧ : ಹೊಸದುರ್ಗ, ಚಿತ್ರದುರ್ಗ, ಶಿವಮೊಗ್ಗ ಮತ್ತು ದಾವಣಗೆರೆ ಕಡೆಗಳಿಂದ ಹೊಳಲ್ಕೆರೆ ಪಟ್ಟಣದೊಳಗೆ ಪ್ರವೇಶಿಸುವ ಎಲ್ಲಾ ಮಾದರಿಯ ವಾಹನಗಳ ಸಂಚಾರ ನಿಷೇಧಿಸಿದೆ.

ಮಾರ್ಗ ಬದಲಾವಣೆ: ಚಿತ್ರದುರ್ಗದಿಂದ ಬರುವ ವಾಹನಗಳು ಚಿತ್ರಹಳ್ಳಿ ಗೇಟ್‍ನಿಂದ ಹೆಚ್.ಡಿ.ಪುರ ಮಾರ್ಗವಾಗಿ ಹೋಗುವುದು ಹಾಗೂ ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಹೋಗುವ ವಾಹನಗಳು ಚಿಕ್ಕಜಾಜೂರು ಹೊಳಲ್ಕೆರೆ ರೈಲ್ವೆ ನಿಲ್ದಾಣದ ಮಾರ್ಗವಾಗಿ ಹೋಗುವುದು. ಹೊಸದುರ್ಗದಿಂದ ಶಿವಮೊಗ್ಗಕ್ಕೆ ಹೋಗುವ ವಾಹನಗಳು ಆವಿನಹಟ್ಟಿ, ಆರೇಹಳ್ಳಿ ರೈಲ್ವೆ ನಿಲ್ದಾಣದ ಮುಖಾಂತರ ಹೋಗುವುದು, ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಹೋಗುವ ವಾಹನಗಳು ಅರೇಹಳ್ಳಿ ರೈಲ್ವೇ ನಿಲ್ದಾಣದ ಮುಖಾಂತರ ಪೂಣಜೂರು, ಮಲ್ಕಾಪುರ, ಚಿಕ್ಕಜಾಜೂರು, ಬಿ.ದುರ್ಗ, ಭೀಮಸಮುದ್ರ ಮಾರ್ಗವಾಗಿ ಹೋಗುವುದು ಹಾಗೂ ಶಿವಮೊಗ್ಗದಿಂದ ಹೊಸದುರ್ಗಕ್ಕೆ ಹೋಗುವ ವಾಹನಗಳು ಅರೇಹಳ್ಳಿ ರೈಲ್ವೇ ನಿಲ್ದಾಣದ ಮುಖಾಂತರ ಮಾಳೇನಹಳ್ಳಿ, ಅವಳಿಹಟ್ಟಿ, ಹೊಳಲ್ಕೆರೆ ಮಾರ್ಗವಾಗಿ ಹೋಗುವುದು. ದಾವಣಗೆರೆಯಿಂದ ಬರುವ ವಾಹನಗಳು ಮಲ್ಕಾಪುರ, ಅರೇಹಳ್ಳಿ ರೈಲ್ವೆ ನಿಲ್ದಾಣದ ಮುಖಾಂತರ ಹೊಳಲ್ಕೆರೆಗೆ ಹೋಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶದಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...