ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 04 : ರೂ. 3,50,000/- ರೂಗಳ ಲಂಚ ಪಡೆಯುತ್ತಿದ್ದ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ತಿಮ್ಮರಾಯಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗ್ರಾಮದ 1ನೇ ದರ್ಜೆ ಎಲೆಕ್ಟಿಕಲ್ ಕಾಂಟ್ರ್ಯಾಕ್ಟರ್ ಸಂಜಯ್ ಅವರಿಂದ

ಎಲೆಕ್ಟ್ರಿಕ್ ಕಾಮಗಾರಿಗೆ ಸಂಬಂಧಿಸಿದ ಅಂದಾಜು ಪಟ್ಟಿಯ ಮೊತ್ತ ರೂ.35.00 ಲಕ್ಷಗಳಿಗೆ 10% ಅಂದರೆ ರೂ.3,50,000/-ಗಳ ಲಂಚದ ಹಣವನ್ನು ಕೇಳಿರುತ್ತಾರೆ. ಇಂದು ನಗರದ ಅಮೃತ ಆಯುರ್ವೇದಿಕ್ ಆಸ್ಪತ್ರೆಯ ಬಳಿ 3,50,000/- ರೂಗಳ ಲಂಚದ ಹಣವನ್ನು ಪಡೆದುಕೊಂಡು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುತ್ತಾರೆ. ಸದ್ಯ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಲೋಕಾಯುಕ್ತ ಎಸ್ಪಿ ವಾಸುದೇವರಾಮ್,
ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















