Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ಸಾಮೂಹಿಕ ರಜೆ : ವರದಿ ಆಧರಿಸಿ ಕಠಿಣ ಕ್ರಮ : ಸಚಿವ ಡಿ.ಸುಧಾಕರ್

---Advertisement---

ಚಿತ್ರದುರ್ಗ. ಸೆ.06 : ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ಸಾಮೂಹಿಕವಾಗಿ ರಜೆ ತೆರಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ಪಡೆದು ಕೂಲಂಕಷವಾಗಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಓ ಅವರಿಗೆ ಸೂಚಿಸಿದ್ದೇನೆ.

ವರದಿ ಆಧರಿಸಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ಸಾಮೂಹಿಕವಾಗಿ ರಜೆ ಪಡೆದು ಪ್ರವಾಸ ತೆರಳಿದ ಕುರಿತು ಮಾಧ್ಯಮಗಳಲ್ಲಿ ವರದಿ ಬಿತ್ತರವಾದ ಹಿನ್ನಲೆಯಲ್ಲಿ, ಶನಿವಾರ ಜಿಲ್ಲಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಿಬ್ಬಂದಿಗಳಿಗೆ ರಜೆ ನೀಡಿ ಜಿಲ್ಲಾಶಸ್ತ್ರ ಚಿಕಿತ್ಸಕರು ಆಡಳಿತದಲ್ಲಿ ಎಡವಿದ್ದಾರೆ. 15 ಸಿಬ್ಬಂದಿಗಳ ಪೈಕಿ 8 ಜನರಿಗೆ ರಜೆ ನೀಡಿದ್ದಾರೆ. ಹಾಜರಾತಿ, ರಜೆ ಅರ್ಜಿ ಸೇರಿದಂತೆ ವಿವಿಧ ದಾಖಲೆಗಳನ್ನು ಪರಿಶೀಲನೆಗೆ ನೀಡುವಂತೆ ಜಿಲ್ಲಾ ಶಸ್ತçಚಿಕಿತ್ಸಕರಿಗೆ ತಿಳಿಸಲಾಗಿದೆ. ತಪ್ಪಿತಸ್ಥರ ವಿರುದ್ದ ನೂರಕ್ಕೆ ನೂರಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಮೇಯವಿಲ್ಲ.  ಸೇವಾ ಮನೋಭಾವದ ವೈದ್ಯರು ಜಿಲ್ಲೆಗೆ ಬೇಕು. ಜನರಿಗೆ ಸರಿಯಾದ ರೀತಿಯಲ್ಲಿ ಉತ್ತಮ ಚಿಕಿತ್ಸೆ ದೊರೆಯಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ. ಜಿಲ್ಲಾಸ್ಪತ್ರೆಯಲ್ಲಿ ಸ್ವಚ್ಛತೆ, ವೈದ್ಯರು, ಶೂಶ್ರೂಷಕರು, ರಕ್ಷಣಾ ಸಿಬ್ಬಂದಿ ಕೊರತೆಯಿದೆ. ಇದನ್ನು  ಸರಿಪಡಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಸಾಮೂಹಿಕವಾಗಿ ರಜೆ ತೆರಳಿದ ಸಿಬ್ಬಂದಿ ಪೈಕಿ ವೈದ್ಯಕೀಯ ಹಾಗೂ ಶೂಶ್ರೂಷಕ ಸಿಬ್ಬಂದಿ ಸಹ ಇರುವುದಾಗಿ ಮಾಹಿತಿಯಿದೆ ಎಂದು ಸಚಿವ ಡಿ.ಸುಧಾಕರ್ ತಿಳಿಸಿದರು.

 

ಸಚಿವ ಡಿ.ಸುಧಾಕರ್ ದಿಢೀರ್ ಭೇಟಿ: ಜಿಲ್ಲಾಸ್ಪತ್ರೆಗೆ ಶನಿವಾರ ದಿಢೀರ್ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ವಿವಿಧ ವಾರ್ಡ್ಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ತುರ್ತು ಚಿಕಿತ್ಸಾ ಘಟಕ  ಸೇರಿದಂತೆ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ, ಒಳರೋಗಿಗಳ ಸ್ಥಿತಿಗತಿಯನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಜಿಲ್ಲಾ ಶಸ್ತç ಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ ಸೇರಿದಂತೆ ಜಿಲ್ಲಾಸ್ಪತ್ರೆಯ ವೈದ್ಯರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment