Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೊಸದುರ್ಗ : ಗಣೇಶ ಮೆರವಣಿಗೆಯಲ್ಲಿ ಪಟಾಕಿ ಸಿಡಿಸಿದ ಸಂಘಟಕರ ಮೇಲೆ ಪ್ರಕರಣ

---Advertisement---

ಚಿತ್ರದುರ್ಗ . ಸೆ.09: ಹೊಸದುರ್ಗ ಪಟ್ಟಣದಲ್ಲಿ ಸೆ.08 ರಂದು ವಿರಾಟ್ ಹಿಂದೂ ಮಹಾ ಗಣಪತಿ ಮೆರವಣಿಯಲ್ಲಿ ಕಲರ್ ಬ್ಲಾಸ್ಟಿಂಗ್ ಹಾಗೂ ಪಟಾಕಿ ಸಿಡಿಸಿದ ಸಂಘಟಕರ ಮೇಲೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಸಮಯದಲ್ಲಿ ಯಾವುದೇ ರೀತಿಯ ಪಟಾಕಿ ಮತ್ತು ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು. ಈ ಆದೇಶ ಉಲ್ಲಂಘಿಸಿ ಹೊಸದುರ್ಗದಲ್ಲಿ ವಿರಾಟ್ ಹಿಂದೂ ಮಹಾ ಗಣಪತಿ ಮೆರವಣಿಗೆ ವೇಳೆ ಮಧ್ಯಾಹ್ನ 3.30 ಸಮಯದಲ್ಲಿ ಪಟ್ಟಣದ ಜೂನಿಯರ್ ಕಾಲೇಜು ಮುಂಭಾಗದಲ್ಲಿ ಕಲರ್ ಬ್ಲಾಸ್ಟಿಂಗ್ ಮಾಡಲಾಗಿತ್ತು. ರಾತ್ರಿ 8 ಗಂಟೆ ಸಮಯದಲ್ಲಿ ಪಟ್ಟಣದ ಹಿರಿಯೂರು ಸರ್ಕಲ್ ಸಮೀಪ ಪಟಾಕಿ ಸಿಡಿಮದ್ದನ್ನು ಸಿಡಿಸಲಾಗಿತ್ತು. ಈ ಹಿನ್ನಲೆಯಲ್ಲಿ ಸಂಘಟಕರಾದ ಪ್ರದೀಪ ತಂದೆ ಮರಿಯಾನಾಯ್ಕ್ ಹಾಗೂ ಶಿವರಾಜ್ ಕುಮಾರ್ ತಂದೆ ರಾಮಪ್ಪ ಇವರ ಮೇಲೆ ಬಿ.ಎನ್.ಎಸ್ ಕಲಂ 292 ಹಾಗೂ ಕೆ.ಪಿ.ಆಕ್ಟ್ ಕಲಂ.108, 109 ಅಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...