Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮದ್ದೂರು ಮಸೀದಿ ಬಗ್ಗೆ ಮೋದಿಗೆ ಮೊದಲೇ ದೂರು : ಕಾರಣವೇನು ಗೊತ್ತಾ..?

---Advertisement---

ಮಂಡ್ಯ: ಮದ್ದೂರಿನ ಗಣೇಶನ ಉತ್ಸವದ ಸಮಯದಲ್ಲಿ ಮಸೀದಿಯೊಳಗಿಂದ ಕಲ್ಲು ಬಂದಿದ್ದು, ವಾತಾವರಣವನ್ನೇ ಕಲುಷಿತ ಮಾಡಿದೆ. 200ಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಸದ್ಯಕ್ಕೆ ವಾತಾವರಣ ತಿಳಿಯಾಗಿದೆ. ಆದರೆ ಈ ಮಸೀದಿ ಬಗ್ಗೆ ಈಗ ಸಾಕಷ್ಟು ಚರ್ಚೆಯಾಗ್ತಾ ಇದೆ. ಆ ಮಸೀದಿಯನ್ನೇ ಅಕ್ರಮವಾಗಿ ನಿರ್ಮಾಣ ಮಾಡಿರುವುದು ಎನ್ನಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಈಗಾಗಲೇ ಸಲ್ಲಿಕೆಯಾಗಿದೆ. ಅದರಲ್ಲೂ ಪ್ರಧಾನಿ ಮೋದಿ ಅವರಿಗೂ ಈ ಸಂಬಂಧ ದೂರು ಹೋಗಿದೆ.

ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ನಿರ್ಮಾಣವಾಗಿರುವ ಈ ಮಸೀದಿ ಅಕ್ರಮ ಎಂದು ಈಗಾಗಲೇ ಜಿಲ್ಲಾಡಳಿತ ಕಚೇರಿಗೆ ಹಾಗೂ ಪ್ರಧಾನಿ ಮೋದಿ ಅವರಿಗೂ ಪತ್ರದ ಮೂಲಕ ದೂರು ದಾಖಲಾಗಿದೆ. ಮಸೀದಿ ಮುಂದೆ ದೇವರ ಉತ್ಸವವಾಗಲಿ, ಮೆರವಣಿಗೆಯಾಗಲಿ ಹಾದು ಹೋಗಬಾರದೆಂಬ ನಿರ್ಬಂಧ ಹೇರಲಾಗಿದೆ. ಅಷ್ಟೇ ಅಲ್ಲ ಸತ್ತ ಹಿಂದೂಗಳ ಶವದ ಮುಂದೆ ಇಲ್ಲಿ ತಮಟೆಯನ್ನು ಬಾರಿಸುವಂತೆ ಇಲ್ಲ. ಆ ರೀತಿಯ ನಿರ್ಬಂಧ ಮಾಡಿದ್ದಾರೆಂದು ಅಲ್ಲಿನ ಸ್ಥಳೀಯರು ಆರೋಪಿಸಿದ್ದಾರೆ.

2025ರ ಜೂನ್ ತಿಂಗಳಿನಲ್ಲಷ್ಟೇ ಈ ಮಸೀದಿಯ ಉದ್ಘಾಟನೆಯಾಗಿತ್ತು. ಆ ಸಂದರ್ಭದಲ್ಲಿಯೇ ಇಲ್ಲಿ ಅಕ್ರಮವಾಗಿ ನಿರ್ಮಾಣ ಕಾರ್ಯ ನಡೆಯುತ್ತಿರುವ ಬಗ್ಗೆ ಸ್ಥಳೀಯರು, ದೂರು ನೀಡಿದ್ದರು. ಆಡಳಿತವನ್ನು ಎಚ್ಚರಿಸುವ ಕೆಲಸ ಆಗಿದೆ. ಮಸೀದಿಯೊಳಗೆ ಅಕ್ರಮ ಮದರಸಾ ನಡೆಸುತ್ತಿದ್ದಾರೆ. ರಾತ್ರಿ ಸಮಯದಲ್ಲಿ ಅಪರಿಚಿತ ವ್ಯಕ್ತಿಗಳು ಓಡಾಡುತ್ತಾರೆ. ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಲ್ಲಿನ ಮಸೀದಿಯೊಳಗಿನಿಂದ ಕಲ್ಲುಗಳು ತೂರಿಕೊಂಡು ಬಂದಿದ್ದು, ಆ ಸಮಯದಲ್ಲಿ ಲೈಟ್ಸ್ ಆಫ್ ಆಗಿತ್ತು. ಹೀಗಾಗಿ ತನಿಖೆ ನಡೆಸುವುದಕ್ಕೆ ಸ್ವಲ್ಪ ನಿಧಾನವಾಗುತ್ತಿದೆ. ಆದರೂ ಈ ಘಟನೆಗೆ ಸಂಬಂಧಿಸಿದಂತೆ 22 ಜನರನ್ನ ಅರೆಸ್ಟ್ ಮಾಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now