ಬೆಂಗಳೂರು: ಶಾಸಕರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರು ಶಾಸಕರಿಗೆ 50 ಕೋಟಿ ಅನುದಾನ ಕೊಡುವ ವಿಚಾರವನ್ನ ಪ್ರಸ್ತಾಪ ಮಾಡಿದ್ದರು. ಇದೀಗ ಆ ಪ್ರಸ್ತಾವನೆಗೆ ಅಧಿಕೃತ ಆದೇಶ ನೀಡಿದ್ದಾರೆ. ಇಂದು ಅನುದಾನ ಬಿಡುಗಡೆ ಕಾರ್ಯಕ್ರಮಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಶಾಸಕರ ಜೊತೆಗೆ ನಡೆದ ಸಭೆಯಲ್ಲಿ ಇದಕ್ಕೆ ಒಪ್ಪಿಗೆನೀಡಿದ್ದಾರೆ.
ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಸಚಿವರು ಹಾಗೂ ಶಾಸಕರ ಜೊತೆ ಸುದೀರ್ಘ ಸಭೆ ನಡೆಸಿ, ಗ್ಯಾರಂಟಿ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿಯ ಮಾಹಿತಿ ಪಡೆದು, ಕ್ಷೇತ್ರದಲ್ಲಿ ಆಗಬೇಕಿರುವ ಕೆಲಸ ಕಾರ್ಯಗಳ ಬೇಡಿಕೆಯನ್ನು ಆಲಿಸಿ, ಅಗತ್ಯ ಸಹಕಾರ ಹಾಗೂ ಅನುದಾನ ಒದಗಿಸುವುದಾಗಿ ತಿಳಿಸಿದೆ. ಬೆಂಗಳೂರಿನ ರಸ್ತೆ, ಒಳಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ಅನುದಾನವನ್ನು ಒದಗಿಸಿ, ಜನರ ಜೀವನಮಟ್ಟ ಸುಧಾರಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
ಇದರಿಂದ ಶಾಸಕರು ಫುಲ್ ಖುಷಿಯಾಗಿದ್ದಾರೆ. ಅನುದಾನ ಬಿಡುಗಡೆ ಮಾಡಿದರೆ ತಮ್ಮ ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿಕೊಳ್ಳಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ಆದರೆ ಈ ಸಂಬಂಧ ಬಿಜೆಪಿ ಶಾಸಕರು ಬೇಸರ ವ್ಯಕ್ತಪಡಿಸಿದ್ದರು. ಅಂತು 50 ಕೋಟಿ ಅನುದಾನ ರಿಲೀಸ್ ಆಗ್ತಿದೆ. ಮೂಲ ಸೌಕರ್ಯ ಯೋಜನೆಯಡಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಹಣ ಬಿಡುಗಡೆ ಮಾಡಲು ಕಾಮಗಾರಿ ವಿವರ ನೀಡುವಂತೆ ಎಲ್ಲಾ ಶಾಸಕರಿಹೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಇತ್ತೀಚೆಗೆ ಪತ್ರವೊಂದನ್ನ ಬರೆದಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















