ಬೆಂಗಳೂರು: ಮದ್ದೂರಿನಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ನಡೆದ ಗಲಭೆಯ ಬಳಿಕ ಬಿಜೆಪಿ ನಾಯಕರೆಲ್ಲಾ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಕೊಂಡಿದ್ದಾರೆ. ಮದ್ದೂರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ.
ಸಿಟಿ ರವಿ ಅವರು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜನರನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದ ಸಮಯದಲ್ಲಿ ಮುಸ್ಲಿಂ ಜನಾಂಗದ ಮೇಲೆ ದ್ವೇಷ ಉಂಟು ಮಾಡುವಂತಹ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿತ್ತು. ಇದೀಗ ಕಾಂಗ್ರೆಸ್ ಸರ್ಕಾರದ ಪರ ಬಿಜೆಪಿ ನಾಯಕರು ಗರಂ ಆಗಿದ್ದಾರೆ. ಭಾಷಣದಲ್ಲಿ ಶೇಕಡ 5 ಇದ್ದಾಗಲೇ ಬಾಲ ಬಿಚ್ಚುತ್ತಿದ್ದಾರೆ. ಇನ್ನೂ 50% ಆದಲ್ಲಿ ನಮ್ಮ ಮಕ್ಕಳು, ಮೊಮ್ಮಕ್ಕಳು ಬದುಕುವುದಕ್ಕೆ ಆಗುತ್ತಾ, ಸಮಾಜ ಒಡೆಯುತ್ತೊಡೆಯುತ್ತಾರೆ ಎಂದು ಬಿಜೆಪಿ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ.
ಆರ್ ಅಶೋಕ್ ಈ ಸಂಬಂಧ ಮಾತನಾಡಿ, ಮದ್ದೂರಿನಲ್ಲಿ ನಿನ್ನೆ ನಾವು ದೊಡ್ಡ ಹೋರಾಟವನ್ನು ಮಾಡಿದ್ದೇವೆ. ನಾವೂ ಮದ್ದೂರಿಗೆ ಹೋಗಿದ್ದು ಬೆಂಬಲ ಕೊಡಲು ಹಾಗೂ ಗಾಯಗೊಂಡವರ ಮನೆಗೆ ಹೋದಾಗ ಅವರು ಹೇಳಿದ್ದು ಏನಂದ್ರೆ ಶವಯಾತ್ರೆ ವೇಳೆ ಮಸೀದಿ ಮುಂದೆ ತಮಟೆ ಹೊಡೆಯಬಾರದಂತೆ. ಆ ಮಸೀದಿಕಟ್ಟಿರುವುದು ಸರ್ಕಾರಿ ಜಾಗದಲ್ಲಿ. ಸಿಟಿ ರವಿ ಉದ್ರೇಕಕಾರಿ ಭಾಷಣ ಮಾಡಿಲ್ಲ. ಇದಕ್ಕಿಂತ ಕೆಟ್ಟದಾಗಿ ಕಾಂಗ್ರೆಸ್ ಅವರು ಬಹಳ ಸಲ ಮಾತನಾಡಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎಂದವರಿಗೆ ಏನು ಮಾಡಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















