ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಇಂದಿನಿಂದ ಕಾಂಗ್ರೆಸ್ ನಾಯಕರು ಪಾದಯಾತ್ರೆ ಶುರು ಮಾಡಿದ್ದಾರೆ. ಕೊರೊನಾ ಟಫ್ ರೂಲ್ಸ್ ಜಾರಿಯಲ್ಲಿದ್ದು, ಇದರ ನಡುವೆಯೇ ಪಾದಯಾತ್ರೆ ಆರಂಭಿಸಿದ್ದಾರೆ. ಕನಕಪುರ ತಾಲೂಕಿನ ಸಂಗಮ ಕ್ಷೇತ್ರದಲ್ಲಿ ಚಾಲನೆ ಸಿಕ್ಕಿದೆ.
10 ದಿನಗಳ ಕಾಲ ಈ ಪಾದಯಾತ್ರೆ ನಡೆಯಲಿದೆ. ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಡೋಲು ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ. ಚಿತ್ರರಂಗದವರು ಕೂಡ ಪಾದಯಾತ್ರೆ ಚಾಲನೆಯಲ್ಲಿ ಭಾಗಿಯಾಗಿದ್ದರು.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ, ಹಿರಿಯ ಕಾಂಗ್ರೆಸ್ ನಾಯಕರು ಸೇರಿದಂತೆ ಹಿರಿಯ ನಟಿ, ಸಚಿವೆ ಉಮಾಶ್ರೀ, ದುನಿಯಾ ವಿಜಿ, ಸಾಧು ಕೋಕಿಲ ಸೇರಿದಂತೆ, ಮಠಾಧೀಶರು ಹಲವರು ಭಾಗಿಯಾಗಿದ್ದರು.
ಜನವರಿ 19 ರವರೆಗೆ ಪಾದಯಾತ್ರೆ ನಡೆಯುತ್ತದೆ. ಕೊರೊನಾ ಕರ್ಫ್ಯೂ ಜಾರಿಯಲ್ಲಿರುವ ಕಾರಣ ರಾಮನಗರದಲ್ಲಿ ಪೊಲೀಸ್ ಬಿಗಿ ಭದ್ರತೆ ನೀಡಲಾಗಿದೆ. ಇದೆಲ್ಲದರ ನಡುವೆ ಕಾಂಗ್ರೆಸ್ ತನ್ನ ಹಠ ಬಿಡದೆ ಕಡೆಗೂ ಪಾದಯಾತ್ರೆ ಶುರು ಮಾಡಿಯೇ ಬಿಟ್ಟಿದೆ.