ವಿಷ್ಣುವರ್ಧನ್, ಸರೋಜಾ ದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ

1 Min Read

ಬೆಂಗಳೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದುವೆ ಕರ್ನಾಟಕ ರತ್ನ ಪ್ರಶಸ್ತಿಯನ್ನ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮರಣೋತ್ತರವಾಗಿ ಡಾ.ವಿಷ್ಣುವರ್ಧನ್ ಹಾಗೂ ಸರೋಜಾ ದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನ ಘೋಷಣೆ ಮಾಡಲಾಗಿದೆ.

ಕಳೆದ ಕೆಲವು ದಿನಗಳ ಹಿಂದಷ್ಟೇ ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಸ್ಯಾಂಡಲ್ ವುಡ್ ಹಿರಿಯ ನಟಿಯರು ಸರ್ಕಾರದ ಬಳಿ ಮನವಿ ಮಾಡಿದ್ದರು. ಆ ಮನವಿಯನ್ನು ಪುರಸ್ಕರಿಸಿದ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ರತ್ನ ಪ್ರಶಸ್ತಿಯನ್ನ ಘೋಷಣೆ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ಭಾರತಿ ವಿಷ್ಣುವರ್ಧನ್ ಹಾಗೂ ಅಳಿಯ ಅನಿರುದ್ಧ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಅಲ್ಲದೇ ಈ ಹಿಂದೆಯೂ ಹಲವು ಕಲಾವಿದರು ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ನೀಡಬೇಕು ಎಂಬ ಬೇಡಿಕೆಯೂ ಕೇಳಿ ಬಂದಿತ್ತು. ಕಳೆದ ಒಂದು ವಾರದ ಹಿಂದೆ ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶೃತಿ, ಮಾಳವಿಕಾ ಅವಿನಾಶ್ ಅವರು ಕೂಡ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು.

ಸರ್ಕಾರಕ್ಕೆ‌ನಾನು ಧನ್ಯವಾದ ಹೇಳುತ್ತೇನೆ. ಅಪ್ಪಾಜಿಗೆ ಕರ್ನಾಟಕ ರತ್ನ ಘೋಷಿಸಿದ್ದಕ್ಕೆ ತುಂಬಾ ಖುಷಿ ಆಯ್ತು. ಅಪ್ಪಾಜಿ ಅವರು ಈ ಕರ್ನಾಟಕ ರತ್ನ ಪ್ರಶಸ್ತಿಗೆ ಅರ್ಹರು. ಅವರು ಯಾವಗಲೂ ನಮ್ಮೊಂದಿಗೆ ಇರುತ್ತಾರೆ. ಕನ್ನಡ ಚಿತ್ರರಂಗದ ಎಲ್ಲಾ ಕಲಾವಿದರಿಗೆ ಧನ್ಯವಾದಗಳು ಎಂದು ನಟ ಅನಿರುದ್ಧ್ ತಿಳಿಸಿದ್ದಾರೆ.

Share This Article
Enable Notifications OK No thanks