ಬೆಂಗಳೂರು: ಜಾತಿ ಗಣತಿ ಸಮೀಕ್ಷೆಯ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮತ್ತೆ ಜಾತಿ ಗಣತಿ ವಿಚಾರ ಮುನ್ನಲೆಗೆ ಬಂದಿದೆ. ಇಂದು ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಸುದ್ದಿಗೋಷ್ಟಿ ನಡೆಸಿ ಈ ಸಂಬಂಧ ಮಾಹಿತಿಯನ್ನ ನೀಡಿದ್ದಾರೆ. ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ 15 ದಿನಗಳ ಕಾಲ ಸಮೀಕ್ಷೆ ನಡೆಸಲಿದೆ.
ಈ ಬಾರಿಯ ಜಾತಿ ಸಮೀಕ್ಷೆ ಹೇಗೆ ನಡೆಯುತ್ತೆ ಎಂಬುದನ್ನ ನೋಡುವುದಾದರೆ, ಶಿಕ್ಷಕರು ಮನೆ ಮನೆಗೂ ಭೇಟಿ ನೀಡಿ ಹೊಸ ಸಮೀಕ್ಷೆ ನಡೆಸಲಿದ್ದಾರೆ. ಹೊಸ ಜಾತಿಗಣತಿ ವೇಳೆ 60 ಮಾದರಿಯ ಪ್ರಶ್ನೆಗಳಿಗೆ ಜನ ಮಾಹಿತಿ ನೀಡಬೇಕು. ಈ ಹಿಂದೆ ಕಾಂತರಾಜ್ ವರದಿ ಸಮೀಕ್ಷೆ ವೇಳೆ 54 ಪ್ರಶ್ನೆಗಳನ್ನು ಕೇಳಲಾಗಿತ್ತು. ಈಗ ಉದ್ಯೋಗ, ಧರ್ಮ, ಶಿಕ್ಷಣ, ಜಮೀನು ಸೇರಿದಂತೆ ಒಟ್ಟು 60 ಪ್ರಶ್ನೆಗಳಿಗೆ ಜನರು ಮಾಹಿತಿ ನೀಡಬೇಕಿದೆ. ಎರಡು ಕೋಟಿ ಮನೆಗಳಿಗೆ ಗಣತಿ ಸಿಬ್ಬಂದಿ ಸ್ಟಿಕ್ಕರ್ ಅಂಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಗಣತಿ ವೇಳೆ ಆಧಾರ್ ಕಾರ್ಡಗ, ಪಡಿತರ ಚೀಟಿ ಕೊಟ್ಟು ಮಾಹಿತಿಯನ್ನು ನೀಡಬೇಕು. ಸಮೀಕ್ಷೆ ವೇಳೆ ಮೊಬೈಲ್ ನಂಬರ್ ಸಹ ಲಿಂಕ್ ಮಾಡಲಾಗುತ್ತದೆ. ಗಣತಿಗೆ ಸಿಬ್ಬಂದಿ ಬಂದ ವೇಳೆ ಮನೆಯಲ್ಲಿ ಇಲ್ಲದವರು ಆಯೋಗದ ಸಹಾಯವಾಣಿ ಸಂಖ್ಯೆ 80507 70004ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಅಥವಾ kacbckarnataka.govt.in ವೆಬ್ಸೈಟ್ ಮೂಲಕವೂ ಸರ್ವೆಯಲ್ಲಿ ಪಾಲ್ಗೊಳ್ಳಬಹುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














