Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕನ್ನಡ ಜಾಗೃತಿ ಸಮಿತಿಗೆ ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖಪ್ಪ ನೇಮಕ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತಿ ಸಮಿತಿ ಸದಸ್ಯರಾಗಿ ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖಪ್ಪ ಸೇರಿದಂತೆ ಐವರನ್ನು ನೇಮಕಗೊಳಿಸಲಾಗಿದೆ.

ಡಾ.ಅಶೋಕ್ ಕುಮಾರ್ ಸಂಗೇನಹಳ್ಳಿ, ಡಾ.ಕೆ.ಚಿತ್ತಯ್ಯ, ಡಾ. ಎಂ.ವೇದಾಂತ್, ಶಶಿಕುಮಾ‌ರ್ ಬಾಲು ಅವರನ್ನು ಚಿತ್ರದುರ್ಗ ಜಿಲ್ಲೆಯ ಸದಸ್ಯರನ್ನಾಗಿ ನೇಮಕಗೊಳಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ (ಆಡಳಿತ ಕನ್ನಡ) ಅಧೀನ ಕಾರ್ಯದರ್ಶಿ ಕೆ.ಆರ್.ರಮೇಶ್‌ ಆದೇಶಿಸಿದ್ದಾರೆ.

ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯದ 11 ಮಹಾನಗರ ಪಾಲಿಕೆಗಳ, ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ ರಾಜ್ಯದ 30 ಜಿಲ್ಲೆಗಳ ಜಿಲ್ಲಾ ಮಟ್ಟದಲ್ಲಿ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನು ನಾಮನಿರ್ದೇಶನ ಮಾಡಿ ಆದೇಶಿಸಿದೆ.

ಜಿಲ್ಲಾ ಮಟ್ಟದ ಮಹಾನಗರ ಪಾಲಿಕೆಗಳ ಹಾಗೂ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಕನ್ನಡ ಜಾಗೃತಿ ಸಮಿತಿ ಸದಸ್ಯರ ಸದಸ್ಯತ್ವವನ್ನು ರದ್ದುಪಡಿಸಿ, ರಾಜ್ಯದ ಪ್ರತಿ ಜಿಲ್ಲೆಗೆ ತಲಾ 5 ಸದಸ್ಯರಂತೆ ಒಟ್ಟು 31 ಜಿಲ್ಲೆಗಳಿಗೆ 155 ಸದಸ್ಯರು ಮತ್ತು 11 ಮಹಾನಗರ ಪಾಲಿಕೆಗಳಿಗೆ ತಲಾ 6 ಸದಸ್ಯರಂತೆ 66 ಸದಸ್ಯರು ಹಾಗೂ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಿಗೆ 28 ಸದಸ್ಯರು ಸೇರಿ ಒಟ್ಟು 249 ಸದಸ್ಯರನ್ನು ಕನ್ನಡ ಜಾಗೃತಿ ಸಮಿತಿಗಳಿಗೆ ನೂತನ ಅಧಿಕಾರೇತರ ಸದಸ್ಯರನ್ನು ನೇಮಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now