Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಾ.ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ : ಚಿತ್ರದುರ್ಗದಲ್ಲಿ ಅಭಿಮಾನಿಗಳ ಸಂಭ್ರಮ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ನಟ ಡಾ.ವಿಷ್ಣುವರ್ಧನ್ ಹಾಗೂ ಪಂಚಭಾಷಾ ತಾರೆ ಬಿ.ಸರೋಜದೇವಿ ಇವರುಗಳಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದಕ್ಕೆ ಕರ್ನಾಟಕ ರಾಜ್ಯ ಡಾ.ವಿಷ್ಣುವರ್ಧನ್‍ರವರ ಆದರ್ಶ ಬಳಗದ ವತಿಯಿಂದ ತುರುವನೂರು ರಸ್ತೆಯಲ್ಲಿರುವ ಡಾ.ವಿಷ್ಣುವರ್ಧನ್ ಪಾರ್ಕ್‍ನಲ್ಲಿ ಗುರುವಾರ ರಾತ್ರಿ ಕೇಕ್ ಕತ್ತರಿಸಿ ಅಭಿಮಾನಿಗಳು ಸಂಭ್ರಮಿಸಿದರು.

ನಾಗರಹಾವು ಚಿತ್ರದ ಮೂಲಕ ಐತಿಹಾಸಿಕ ಚಿತ್ರದುರ್ಗದ ಕೋಟೆಯನ್ನು ನಾಡಿನಾದ್ಯಂತ ಪರಿಚಯಿಸಿದ ಡಾ.ವಿಷ್ಣುವರ್ಧನ್‍ರವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿರುವುದು ಅವರ ಆತ್ಮಕ್ಕೆ ಶಾಂತಿ ಸಿಕ್ಕಂತಾಗಿದ್ದು, ಅಭಿಮಾನಿಗಳಲ್ಲಿ ಅತೀವ ಸಂತಸವುಂಟಾಗಿದೆ ಎಂದು ಕರ್ನಾಟಕ ರಾಜ್ಯ ಡಾ.ವಿಷ್ಣುವರ್ಧನ್ ಆದರ್ಶ ಬಳಗದ ರಾಜ್ಯಾಧ್ಯಕ್ಷ ಸಿ.ಕೆ.ಗೌಸ್‍ಪೀರ್ ಹೇಳಿದರು.

ಹೇಮಂತ್‍ರಾಜ್, ರಘುವಿಷ್ಣು, ಲಯನ್‍ಬಾಬು, ರಾಜೇಶ್, ಲಕ್ಷ್ಮಣ್, ಅಜಯ್, ರಾಜು, ವೈಭವ್ ಹಾಗೂ ಪುಟಾಣಿಗಳಾದ ಖುಷಿ, ವಿಷ್ಣು, ರಿದ್ವಿನ್ ಇವರುಗಳು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...