Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿ ಸ್ಥಾಪನೆಗೆ 15 ದಿನದ ಗಡುವು : ನ್ಯಾಯಾಧೀಶ ವೀರಣ್ಣ ಸೋಮಶೇಖರ್

---Advertisement---

ಚಿತ್ರದುರ್ಗ. ಸೆ.12: ಮಾನಸಿಕ ಆರೋಗ್ಯ ಕಾಯ್ದೆ ಅನ್ವಯ ಜಿಲ್ಲಾಸ್ಪತ್ರೆಗಳಲ್ಲಿ ಪ್ರತ್ಯೇಕ ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿಯನ್ನು ಸ್ಥಾಪಿಸುವುದು ಕಡ್ಡಾಯವಾಗಿದೆ. 15 ದಿನದ ಒಳಗಾಗಿ ಜಿಲ್ಲಾಸ್ಪತ್ರೆಯಲ್ಲಿ ಮಂಡಳಿ ಸ್ಥಾಪನೆಗೆ ಜಿಲ್ಲಾ ಶಸ್ತ್ರಚಿಕಿತ್ಸಕರು ಕ್ರಮ ಕೈಗೊಳ್ಳಬೇಕು ಎಂದು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೀರಣ್ಣ ಸೋಮಶೇಖರ್ ಸೂಚನೆ ನೀಡಿದರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದ 1ನೇ ಮಹಡಿಯಲ್ಲಿರುವ ಮಧ್ಯಸ್ಥಿಕೆ ಕೇಂದ್ರದಲ್ಲಿ ಶುಕ್ರವಾರ ಮಾನಸಿಕ ಆರೋಗ್ಯ ವಿಮರ್ಶೆ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಮಂಡಳಿಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ.  ಮಾನಸಿಕ ಆರೋಗ್ಯವನ್ನು ಗಂಭೀರವಾಗಿ ಪರಿಗಣಿಸಿ, ಜಿಲ್ಲಾಸ್ಪತ್ರೆಯಲ್ಲಿ ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿಯ ದೂರು ಸ್ವೀರಿಸುವ ಕೌಂಟರ್ ಸ್ಥಾಪಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದ ಅಡಿ ಮಂಡಳಿ ಕಾರ್ಯನಿರ್ವಹಿಸುತ್ತಿದ್ದು, ಮಾನಸಿಕ ಅಸ್ವಸ್ಥ ವ್ಯಕ್ತಿಗಳ ಹಕ್ಕುಗಳನ್ನು ರಕ್ಷಿಸುತ್ತದೆ ಮತ್ತು ಮಾನಸಿಕ ಆರೋಗ್ಯ ಸೇವೆಗಳ ಮೇಲ್ವಿಚಾರಣೆ ನಡೆಸುತ್ತದೆ ಎಂದು ತಿಳಿಸಿದ ಅವರು, ಜಿಲ್ಲಾಸ್ಪತ್ರೆಯಲ್ಲಿ ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿಯ ದೂರು ಸ್ವೀಕರಿಸುವ ಕೌಂಟರ್ ಅನ್ನು ಸ್ಥಾಪಿಸಿ, ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸುವ ಜವಾಬ್ದಾರಿಯನ್ನು ಜಿಲ್ಲಾ ಶಸ್ತ್ರಚಿಕಿತ್ಸಕರು ಹೆಚ್ಚುವರಿಯಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲು ವಿವಿಧ ಬಗೆಯ ರಿಜಿಸ್ಟರ್‍ಗಳನ್ನು ನಿರ್ವಹಿಸಬೇಕು. ಅಡ್ವಾನ್ಸ್ ಡೈರೆಕ್ಟರಿ, ನಾಮನಿರ್ದೇಶನ ಪ್ರತಿನಿಧಿ, ದೂರು ಸ್ವೀಕರಿಸುವ ಪುಸ್ತಕ, ಮಾನಸಿಕ ಆರೋಗ್ಯ ವೃತ್ತಿಪರರ ವಿರುದ್ಧ ದೂರು, ವೈದ್ಯಕೀಯ ಅಧಿಕಾರಿಯ ವಿರುದ್ಧ ದೂರು, ಮಾನಸಿಕ ಆರೋಗ್ಯ ಸಂಸ್ಥೆಯ ವಿರುದ್ಧ ದೂರು, ಅರ್ಜಿಗಳನ್ನು ಸ್ವೀಕರಿಸಿದ ನಂತರ ಗೊತ್ತುಪಡಿಸಿದ ಸಿಬ್ಬಂದಿ ಅದನ್ನು ಸಂಬಂಧಪಟ್ಟ ರಿಜಿಸ್ಟರ್‍ನಲ್ಲಿ ನಮೂದಿಸಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಮೂಲಕ ಜಿಲ್ಲಾ ಮಂಡಳಿಗೆ ಕಳುಹಿಸಬೇಕು ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ  ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಮಾತನಾಡಿ, ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿಯನ್ನು 15 ದಿನದೊಳಗೆ ಅನುಷ್ಠಾನಗೊಳಿಸಬೇಕು. ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ವಾತಾವರಣ ನಿರ್ಮಿಸುವ ಮೂಲಕ ಮಾನಸಿಕ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ನೀಡಬೇಕು ಎಂದು ತಾಕೀತು ಮಾಡಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಮಾತನಾಡಿ, ಜಿಲ್ಲಾಸ್ಪತ್ರೆಯಲ್ಲಿ ಮಾನಸಿಕ ರೋಗಿಗಳ ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸದ್ಯದ ಮಟ್ಟಿಗೆ ಐದು ಹಾಸಿಗೆಗಳನ್ನು ಮಾನಸಿಕ ರೋಗಿಗಳ ಚಿಕಿತ್ಸೆಗೆ ಮೀಸಲಿಡಲಾಗುವುದು. ನಂತರ ದಿನಗಳಲ್ಲಿ ಹೆಚ್ಚುವರಿಯಾಗಿ ಐದು ಹಾಸಿಗೆಗಳಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಆಸ್ಪತ್ರೆ ಮನೋ ವೈದ್ಯೆ ಡಾ.ಪಾರ್ವತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ, ಮನೋ ಸಾಮಾಜಿಕ ತಜ್ಞ ನಾಗರಾಜ ಮಠ, ಹಾಯ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶ್ರೀಹರ್ಷ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...