Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಾಸನ ದುರಂತಕ್ಕೆ ಕಂಬನಿ ಮಿಡಿದ ಮೋದಿ : ಚಿತ್ರದುರ್ಗದ ಮಿಥುನ್ ಸಾವು..!

---Advertisement---

ಸುದ್ದಿಒನ್, ಸೆಪ್ಟೆಂಬರ್. 13 : ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ಸಾವಿನ ಮೆರವಣಿಗೆಯಾಗಿದೆ. ಡಿಜೆ ಸೌಂಡಿಗೆ ಸ್ಟೆಪ್ ಹಾಕುತ್ತಿದ್ದವರ ಮೇಲೆ ಟ್ರಕ್ ಹರಿದು 9 ಜನರು ಸಾವನ್ನಪ್ಪಿದ್ದಾರೆ. ಈ ದುರಂತಕ್ಕೆ ಚಾಲಕರ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಬೈಕ್ ಸವಾರ ಬೇಕಾಬಿಟ್ಟಿಯಾಗಿ ಬಂದದ್ದು ಹಾಗೂ ಲಾರಿ ಚಾಲಕ ನಿರ್ಲಕ್ಷ್ಯವೇ ಕಾರಣವಾಗಿದೆ ಎನ್ನಲಾಗಿದೆ.

ಈ ಸಂಬಂಧ ಈಗಾಗಲೇ ಚಾಲಕನನ್ನು ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಅಪಘಾತ ಮಾಡಿದ ವಾಹನ ಮಹಾರಾಷ್ಟ್ರ ಮೂಲದ್ದಾಗಿದೆ. ಚಾಲಕ ಹೊಳೆನರಸೀಪುರ ತಾಲೂಕಿನ ಕಟ್ಟೆಬೆಳಗುಲಿ ಗ್ರಾಮದ ಭುವನೇಶ್ ಕೂಡ ಗಾಯಗೊಂಡಿದ್ದಾನೆ. ಸದ್ಯ ಪೊಲೀಸರು ಪ್ರಕರಣ ಸಂಬಂಧ ಲಾರಿ ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಹಾಸನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಂಬನಿ ಮಿಡಿದಿದ್ದಾರೆ. ಕರ್ನಾಟಕದ ಹಾಸನದಲ್ಲಿ ನಡೆದ ಅಪಘಾತವು ಹೃದಯ ವಿದ್ರಾವಕವಾಗಿದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತೇನೆ. ಮೃತರ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಹಾಗೂ ಗಾಯಾಳುಗಳಿಗೆ 50 ಸಾವಿರ ರೂಪಾಯಿ ನೀಎಲಾಗುವುದು ಎಂದು ತಿಳಿಸಿದ್ದಾರೆ.

ಈ ದುರ್ಘಟನೆಯಲ್ಲಿ ಸಾವನ್ನಪ್ಪಿರುವವರೆಲ್ಲಾ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎಂಬ ನೋವಿದೆ. ಅದರಲ್ಲೂ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಹಾಸ್ಟೆಲ್​ನಲ್ಲಿ ಸ್ನೇಹಿತರೆಲ್ಲ ಸೇರಿ ಬರ್ತಡೇ ಸೆಲೆಬ್ರೇಸಷನ್ ಕೂಡ ಮಾಡಿದ್ರು. ಆನಂತರ ಹಾಸ್ಟೆಲ್​ಗೆ ಬಂದು ಗಣಪತಿ ವಿಸರ್ಜನೆಗೆ ಹೋದಾಗ ದುರಂತ ಅಂತ್ಯಕಂಡಿದ್ದಾನೆ. ಮೃತ ಮಿಥನ್ ಮೂಲತಃ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕು ಗವಿರಂಗನಾಥಪುರ ನಿವಾಸಿ. ಹಾಸನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ. ಗವಿರಂಗಾಪುರ ಗ್ರಾಮದ ನಾಗರಾಜ್​ಗೆ ಒಬ್ಬನೇ ಮಗ ಮಿಥುನ್.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...