Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡ್ರೈವರ್ ಗಳ ತಪ್ಪಿನಿಂದ ಅಪಘಾತವಾದ್ರೆ ಸರ್ಕಾರ ಹೇಗೆ ಹೊಣೆಯಾಗುತ್ತೆ..?: ಸಿದ್ದರಾಮಯ್ಯ ಪ್ರಶ್ನೆ

---Advertisement---

 

ಬೆಂಗಳೂರು: ಹಾಸನದಲ್ಲಿ ನಡೆದ ಅಪಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಧಾರುಣವಾಗಿ ಸಾವನ್ನಪ್ಪಿದ್ದಾರೆ. ಅಪಾರ ಕನಸು ಕಂಡಿದ್ದ ಪೋಷಕರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಓದು ಮುಗಿಸಿ ಮಗ ಇಂಜಿನಿಯರ್ ಆಗ್ತಾನೆ ಎಂಬ ದೊಡ್ಡ ಕನಸು ಕಂಡಿದ್ದರು. ವಿಧಿ ಹೀಗೆ ಅರ್ಧದಲ್ಲಿಯೇ ಕರೆದುಕೊಂಡು ಹೋದರೆ ಆ ತಂದೆ ತಾಯಿಯ ನೋವು ಸಹಿಸೋದು ಹೇಗೆ. ಇದೀಗ ಕೇಂದ್ರ ಸರ್ಕಾರದಿಂದ ಮೋದಿ ಅವರು ಎರಡು ಲಕ್ಷ ಪರಿಹಾರ ಘೋಷಿಸಿದ್ದು, ರಾಜ್ಯದಿಂದ ಹತ್ತು ಲಕ್ಷ ಪರಿಹಾರ ನೀಡುವಂತೆ ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ. ಅದಕ್ಕೆ ಸಿದ್ದರಾಮಯ್ಯ ಹೇಳಿದ್ದು ಹೀಗೆ.

ಅಪಘಾತಗಳು ಆಗಬಾರದು ಎಂಬ ಕಾರಣಕ್ಕೇನೆ ರೋಡ್ ರೂಲ್ಸ್ ಮಾಡಿದ್ದೀವಿ. ಆದ್ರೆ ಡ್ರೈವರ್ ಗಳ ತಪ್ಪಿನಿಂದ ಆಕ್ಸಿಡೆಂಟ್ ಆದ್ರೆ ಸರ್ಕಾರ ಹೇಗೆ ಹೊಣೆ ಆಗುತ್ತೆ. ನಿನ್ನೆ ಲಾರಿ ನುಗ್ಗಿ ಅಪಘಾತವಾಗಿದೆ. ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡರಿಗೆ ಹೇಳಿದ್ದೀನಿ. ಬೆಳಗ್ಗೆನೆ ಅಲ್ಲಿ ಹೋಗಿ ಪರಿಶೀಲನೆ ಮಾಡಿ, ಪರಿಹಾರ ನೀಡಿ ಅಂತ ಹೇಳಿದ್ದೇನೆ. ಪರಿಹಾರವನ್ನು ನೀಡಿದ್ದಾರೆ. ಆ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಆ ನೋವನ್ನ ಭರಿಸುವ ಶಕ್ತಿ ನೀಡಲಿ ಭಗವಂತ ಎಂದಿದ್ದಾರೆ.

ಇದೇ ವೇಳೆ ಬಿಜೆಪಿಗರು ಹತ್ತು ಲಕ್ಷಕ್ಕೆ ಒತ್ತಾಯಿಸ್ತಾ ಇದ್ದಾರೆ ಸರ್ ಎಂದಾಗ, ಅವರು ಎಷ್ಟು ಕೊಟ್ಟಿದ್ದಾರೆ. ಅವರು ಹೆಚ್ಚೇನು ಘೋಷಿಸಿಲ್ಲ. ಪರಿಹಾರ ಅಂತ ಕೊಡ್ತಾ ಇರೋದು ಸತ್ತೋರನ್ನ ವಾಪಸ್ ತರ್ತೀವಿ ಅಂತ ಅಲ್ಲ. ಸರ್ಕಾರ ಇಂಥಹ ಸಂದರ್ಭದಲ್ಲಿ ಅವರ ಜೊತೆಗೆ ಸದಾ ನಿಲ್ಲಲಿದೆ. ಅವರ ಕುಟುಂಬಸ್ಥರಿಗೆ ಸಾಂತ್ವಾನ ಹೇಳುವುದಕ್ಕೆ ಈ ರೀತಿ ಮಾಡ್ತೀವಿ. ಸಾವಿಗೆ ಸಮಾನ ಅಂತಲ್ಲ ಅದು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now