ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 13 : ಕ್ರೀಡೆಗಳಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಕಲಿಕೆಯೊಂದಿಗೆ ಕ್ರೀಡೆಗೂ ಪ್ರಾಮುಖ್ಯತೆ ನೀಡುವ ಮೂಲಕ ಜೀವನದಲ್ಲಿ ಯಶಸ್ಸು ಗಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅಭಿಪ್ರಾಯಪಟ್ಟರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ 2025-26ನೇ ಸಾಲಿನ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿ, ಮಾತನಾಡಿದರು.
ಕ್ರೀಡೆಗಳು ವಿದ್ಯಾರ್ಥಿಗಳ ದೈಹಿಕ, ಆರೋಗ್ಯ, ಶಿಸ್ತು, ನಾಯಕತ್ವ ಬೆಳೆಸುವ ಮಾರ್ಗ, ಈ ಕ್ರೀಡಾಕೂಟಗಳು ವಿದ್ಯಾರ್ಥಿಗಳ ಭವಿಷ್ಯದ ನಿರ್ಮಾಣಕ್ಕೆ ದಾರಿ ಎಂದರು.
ವಿದ್ಯಾರ್ಥಿಗಳು ಓದುವ ಅಭ್ಯಾಸದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಉತ್ತಮ ಆರೋಗ್ಯ ಹೊಂದಬಹುದು. ಗ್ರಾಮೀಣ ಭಾಗದಿಂದ ರಾಜ್ಯ ಮಟ್ಟಕ್ಕೆ ಗುರುತಿಸಿಕೊಂಡು ತಾಲ್ಲೂಕಿಗೆ ಕೀರ್ತಿ ತರಬೇಕು ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಆರ್ ಬಾಲಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಕಾಲೇಜು ಉಪ ನಿರ್ದೇಶಕ ಕೆ.ತಿಮ್ಮಯ್ಯ, ತಾಲೂಕು ಗ್ಯಾರಂಟಿಗಳ ಅನುಷ್ಠಾನ ಸಮಿತಿ ಅಧ್ಯಕ್ಷ. ಪಿ ಕೃಷ್ಣಮೂರ್ತಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ರವೀಂದ್ರ ನಾಯ್ಕ್, ನಗರಸಭೆ ಪೌರಾಯುಕ್ತ ಎ. ವಾಸೀಂ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಎಂಡಿ ಸಣ್ಣಪ್ಪ, ಮಮತಾ, ಮುಖಂಡ ಜ್ಞಾನೇಶ್. ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಕೆಆರ್ ತಿಪ್ಪೇಸ್ವಾಮಿ, ತಾಲೂಕು ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


