Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ : ಶಿವಮೊಗ್ಗದಲ್ಲಿ ಯಾವನಿಗೂ ಬಾಲ ಬಿಚ್ಚಲ್ಲ ಬಿಡಲ್ಲ : ಮಧು ಬಂಗಾರಪ್ಪ ಗರಂ

---Advertisement---

ದಾವಣಗೆರೆ: ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಕ್ಷೇತ್ರದ ಬಗ್ಗೆ ಮಾತನಾಡಿದ್ದಾರೆ. ಶಿವಮೊಗ್ಗದಲ್ಲಿ ಯಾವನಿಗೂ ಬಾಲ ಬಿಚ್ಚೋದಕ್ಕೆ ಬಿಡಲ್ಲ ಎಂದಿದ್ದಾರೆ. ಇತ್ತೀಚೆಗೆ ಭದ್ರಾವತಿಯಲ್ಲಿ ಕಿಡಿಗೇಡಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದರು. ಆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಮಧು ಬಂಗಾರಪ್ಪ, ಅಲ್ಲಿ ಘೋಷಣೆ ಕೂಗಿದ ಪದ ಬೇರೆ ಇದೆ. ಆ ರೀತಿ ಇಲ್ಲವೇ ಇಲ್ಲ. ಪಾಕಿಸ್ತಾನ ಪರ ಕೂಗಿದ್ದು ನಿಮಗೆ ಗೊತ್ತಾ..? ಏನು ಗೊತ್ತು ಹೇಳಿ ಎಂದು ಮಾಧ್ಯಮದವರನ್ನೇ ಪ್ರಶ್ನೆ ಮಾಡಿದ್ದಾರೆ.

ಅಲ್ಲದೇ ಏನು ಕೂಗಿದರು ಎಂಬ ಬಗ್ಗೆ ನನ್ನ ಹತ್ತಿರ ಮಾಹಿತಿ ಇದೆ. ಆದರೆ ಈಗ ಮಾತನಾಡುವುದಿಲ್ಲ. ಎಫ್ಎಸ್ಎಲ್ ವರದಿ ಬಂದ ನಂತರ ನಾನು ಮಾತನಾಡುತ್ತೇನೆ. ಏನಾದರೂ ಆ ರೀತಿ ಹೇಳಿದ್ದರೆ ಅವರಿಗೆ ಕಠಿಣವಾದ ಶಿಕ್ಷೆ ನೀಡಿ ಎಂದು ನಾನೇ ಹೇಳಿದ್ದೇನೆ. ಬೇರೆ ದೇಶಕ್ಕೆ ಜಿಂದಾಬಾದ್ ಎನ್ನುವುದು ಕಾಂಗ್ರೆಸ್ ಗೆ ಏನು ಬಂದಿಲ್ಲ. ಬಿಜೆಪಿಯವರು ಹೇಳುತ್ತಾರೆ ಅಂತ ಎಲ್ಲದಕ್ಕೂ ಉತ್ತರ ಕೊಡುವುದಕ್ಕೂ ಆಗಲ್ಲ. ಪಹಲ್ಗಾಮ್‌ನಲ್ಲಿ ದಾಳಿ ನಡೆದಿತ್ತು, ಅದರ ಮುನ್ಸೂಚನೆ ಮೋದಿಗೆ ಗೊತ್ತಿರಲಿಲ್ವಾ? ಅಲ್ಲಿ ಜನರು ತೀರಿಕೊಂಡರು, ಇಲ್ಲಿ ಬಿಜೆಪಿಯವರು ವಿಜೃಂಭಿಸುತ್ತಿದ್ದಾರೆ. ಯಾಕೆ ಈ ದಾಳಿ ಆಯ್ತು ಎಂದು ಒಬ್ಬ ಬಿಜೆಪಿಯವನಾದ್ರೂ ಕೇಳಿದ್ದಾನಾ? ಮಣಿಪುರ ಗಲಾಟೆಯಾದಾಗ ಬಿಜೆಪಿಗರ ಗಂಟಲು ಹೋಗಿತ್ತಂತಾ? ಈಗ ಮದ್ದೂರಿನ ವಿಚಾರಕ್ಕೆ ಬಿಜೆಪಿಗರು ಹೋಗಿದ್ದಾರೆ ಎಂದು ಗರಂ ಆಗಿದ್ದಾರೆ. ಸದ್ಯ ಭದ್ರಾವತಿಯಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿದವರ ವಿರುದ್ಧ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಎಫ್ಎಸ್ಎಲ್ ವರದಿಗಾಗಿ ಕಾಯುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now