ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 14 : ತಮಟಕಲ್ಲು ರಸ್ತೆ ಈಶ್ವರ ಬಡಾವಣೆ ನಿವಾಸಿ ನಿವೃತ್ತ ಪೋಸ್ಟ್ ಮಾಸ್ಟರ್ ಸಿ.ನಾಗೇಂದ್ರರಾವ್(85) ಭಾನುವಾರ ಬೆಳಿಗ್ಗೆ 11 ಗಂಟೆಗೆ ನಿಧನರಾದರು.
ಮೃತರು ಪತ್ನಿ, ಛಲವಾದಿ ಗುರುಪೀಠದ ಬಸವನಾಗಿದೇವಸ್ವಾಮಿ ಸೇರಿದಂತೆ ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬಸವೇಶ್ವರ ಮೆಡಿಕಲ್ ಕಾಲೇಜಿಗೆ ಮೃತರ ದೇಹವನ್ನು ದಾನ ಮಾಡಲಾಯಿತೆಂದು ಕುಟುಂಬದವರು ತಿಳಿಸಿದ್ದಾರೆ.




