ವಕ್ಫ್ ಮಂಡಳಿಯಲ್ಲಿ ಸದಸ್ಯತ್ವಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನ ನೀಡಿದೆ. ವಕ್ಫ್ ಮಂಡಳಿಯ ವಕ್ಫ್ ಮಂಡಳಿಯ ಸದಸ್ಯರಾಗಲು ಕನಿಷ್ಠ 5 ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಅನುಸರಿಸುವ ಷರತ್ತನ್ನು ವಿಧಿಸಿದ ನಿಬಂಧನೆಯನ್ನು ನ್ಯಾಯಾಲಯವು ಪ್ರಸ್ತುತ ತಡೆಹಿಡಿದಿದೆ. ಈ ನಿಟ್ಟಿನಲ್ಲಿ ಸರಿಯಾದ ನಿಯಮಗಳನ್ನು ರೂಪಿಸುವವತೆಗರ ಈ ನಿಂಬಂಧನೆಯನ್ನು ಜಾರಿಗೆ ತರಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಇದಲ್ಲದೆ ಸೆಕ್ಷನ್ 3(74) ಗೆ ಸಂಬಂಧಿಸಿದಂತೆ ಕಂದಾಯ ದಾಖಲೆಗಳ ಒದಗಿಸುವಿಕೆಯನ್ನು ಸಹ ತಡೆಹಿಡಿಯಲಾಗಿದೆ. ವಕ್ಫ್ ಕಾನೂನಿಗೆ ಸಂಬಂಧಿಸಿದ ಕೆಲವು ವಿಭಾಗಗಳನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆ. ವಕ್ಫ್ ಕಾನೂನಿನ ಸೆಕ್ಷನ್ 3 ಮತ್ತು ಸೆಕ್ಷನ್ 4 ಅನ್ನು ನ್ಯಾಯಾಲಯ ನಿಷೇಧಿಸಿದೆ. ವಿಚಾರಣೆಯ ನಂತರ ಸಫಲಂಪೂರ್ಣ ಕಾನೂನನ್ನು ನಿಷೇಧಿಸುವ ಹಕಗಕು ನಮಗಿಲ್ಲ ಎಂದು ನ್ಯಾಯಾಲಯ ಹೇಳಿದೆ. ವಕ್ಫ್ ಮಂಡಳಿಯ ಸಿಇಒ ಮುಸ್ಲಿಂ ಸಮುದಾಯದಿಂದ ಬಂದಿರಬೇಕು ಎಂದು ನ್ಯಾಯಾಯ ಹೇಳಿದೆ.

ವಕ್ಫ್ ಮಂಡಳಿಯ 11 ಸದಸ್ಯರಲ್ಲಿ ಮೂರಕ್ಕಿಂತ ಹೆಚ್ಚು ಮುಸ್ಲಿಮೇತರರು ಇರಬಾರದು ಎಂದು ನ್ಯಾಯಾಲಯ ತಿಳಿಸಿದೆ. ವಕ್ಫ್ ತಿದ್ದುಪಡಿ ಕಾಯ್ದೆ 2025ರ ಕಾರ್ಯಾಚರಣೆಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ನಿರಾಕರಣೆ ಮಾಡಿದೆ. ಆದರೆ ವಕ್ಫ್ ಆಗಿ ಆಸ್ತಿಯನ್ನು ಅರ್ಪಿಸಲು ಐದು ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಆಚರಿಸುವ ಷರತ್ತಿನ ಅನುಷ್ಠಾನವನ್ನು ತಡೆಹಿಡಿದಿದೆ. ಈ ಸಂಬಂಧ ಸುಪ್ರೀಂ ಕೋರ್ಟ್ ಮೇ 22 ರಂದು ಮಧ್ಯಂತರ ಆದೇಶವನ್ನು ಕಾಯ್ದಿರಿಸಿತ್ತು. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠವು ಸತತ ಮೂರು ದಿನಗಳ ಕಾಲ ಅರ್ಜಿದಾರರು ಮತ್ತು ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ವಾದಗಳನ್ನು ಆಲಿಸಿತ್ತು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















