Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮತ್ತೆ ಕೋರ್ಟ್ ಮೆಟ್ಟಿಲೇರಿದ ದರ್ಶನ್ : ಜಾಮೀನಿಗಾಗಿ ಅಲ್ಲ..!

---Advertisement---

ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ವಿಚಾರ ಎಲ್ಲರಿಗೂ ಗೊತ್ತೆ ಇದೆ. ಆದರೆ ಅಲ್ಲಿ ದರ್ಶನ್ ಗೆ ಯಾವುದೇ ರೀತಿಯ ವಿಐಪಿ ಟ್ರೀಟ್ಮೆಂಟ್ ನೀಡದೆ ಸಾಮಾನ್ಯ ಕೈದಿಯ ರೀತಿಯೇ ನೋಡಿಕೊಳ್ಳುತ್ತಿದ್ದಾರೆ. ಇದರಿಂದ ದರ್ಶನ್ ಗೆ ಜೈಲಿನಲ್ಲಿ ಸರಿಯಾಗಿ ನಿದ್ದೆ ಮಾಡುವುದಕ್ಕೂ ಆಗ್ತಾ ಇಲ್ಲ. ಕಳೆದ ಬಾತಿ ಕೋರ್ಟ್ ಮುಂದೆ ಹಾಜರಾದಾಗಲೇ ಜಡ್ಜ್ ಗಳಿಗೆ ಮನವಿ ಮಾಡಿಕೊಂಡಿದ್ದರು. ನಂಗೆ ಒಂದು ಚೂರು ವಿಷ ಕೊಟ್ಟು ಬಿಡಿ ಎಂದು ಕೇಳಿದ್ದರು. ಹಾಸಿಗೆ, ದಿಂಬಿಲ್ಲ, ಸೂರ್ಯನ್ನ ನೋಡಿ ಎಷ್ಟೋ ದಿನಗಳಾಯ್ತು ಎಂದಿದ್ದರು. ಕೋರ್ಟ್ ಕೂಡ ಅದನ್ನ ಕೊಟ್ಟು ಬಿಡಲು ಅನುಮತಿ ನೀಡಿದ್ದರು. ಆದರೂ ಆ ಸೌಲಭ್ಯವನ್ನ ಇನ್ನು ನೀಡಿಲ್ಲ.

ಈ ಸಂಬಂಧ ದರ್ಶನ್ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಬೆಂಗಳೂರಿನ 64 ನೇ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕಾರಿಡಾರ್ ನಲ್ಲಿ ವಾಕ್ ಮಾಡುವುದಕ್ಕೆ ಮಾತ್ರ ಅಧಿಕಾರಿಗಳು ಅವಕಾಶ ನೀಡಿದ್ದಾರೆ. ಸೆಷನ್ಸ್ ಕೋರ್ಟ್ ಹೇಳಿದ್ದ ಕನಿಷ್ಠ ಸೌಲಭ್ಯ ನೀಡುತ್ತಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಸೆಷನ್ಸ್ ಕೋರ್ಟ್ ಗೆ ದರ್ಶನ್ ಪರ ವಕೀಲ ಎಸ್ ಸುಶೀಲ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆಗೆ ಶಿಫಾರಸ್ಸು ಕೋರಿ ಮನವಿಯನ್ನು ಸೆಷನ್ಸ್ ಕೋರ್ಟ್ ಗೆ ಮಾಡಿಕೊಂಡಿದ್ದಾರೆ. ಹೈಕೋರ್ಟ್ ಗೆ ನ್ಯಾಯಾಂಗ ನಿಂದನೆ ಕೇಸ್ ಗೆ ಶಿಫಾರಸು ಮಾಡಿ ಎಂದು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಜೈಲಾಧಿಕಾರಿಗಳಿಗೆ ಸೆಷನ್ಸ್ ಕೋರ್ಟ್ ಆದೇಶ ನೀಡಲು ಹೋದಾಗ ಸರಿಯಾಗಿ ಸ್ಪಂದಿಸಿಲ್ಲ ಎಂಬ ಆರೋಪ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now