ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 15 : ಅಭಿವೃದ್ಧಿ ವಿಚಾರದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಹಕಾರ ಮುಖ್ಯವಾಗುತ್ತದೆ. ಪರಸ್ಪರ ಸೇವಾ ಮನೋಭಾವಗಳಿಂದ ಮತ್ತು ಅವರವರ ಕರ್ತವ್ಯಗಳನ್ನು ಅರಿತು ಕಾರ್ಯನಿರ್ವಹಿಸಿದಾಗ ಮಾತ್ರ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಾಧ್ಯವಾಗುತ್ತದೆ ಎಂದು ನಗರಸಭೆ ಅಧ್ಯಕ್ಷೆ ಎಂ.ಪಿ.ಅನಿತಾರಮೇಶ್ ಅಭಿಪ್ರಾಯ ಪಟ್ಟರು.
ಇಲ್ಲಿನ ನಗರಸಭೆ ಕಚೇರಿಯಲ್ಲಿ ಸೋಮವಾರದಂದು ಅಧಿಕಾರ ಸ್ವಿಕಾರ ಮಾಡಿದ ಬಳಿಕ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಚುನಾಯಿತ ಪ್ರತಿನಿಧಿಗಳ ನಡುವೆ ಉತ್ತಮ ಬಾಂಧವ್ಯ ಇದ್ದರೆ ಮಾತ್ರ ಏನಾದರೂ ಪ್ರಗತಿ ಕಾಣಲು ಸಾದ್ಯವಾಗುತ್ತದೆ. ಎಲ್ಲರೂ ಅವರವರ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕಾಗುತ್ತದೆ. ಕಾನೂನು ಮತ್ತು ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗ ಜನರ ನೋವು ನಲಿವುಗಳನ್ನು ಅರ್ಥಮಾಡಿಕೊಂಡು ಮುನ್ನಡೆಯಬೇಕು ಎಂದರು.
ಚಿತ್ರದುರ್ಗ ನಗರಸಭೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ನಗರದ ವ್ಯಾಪ್ತಿಯೂ ವಿಸ್ತಾರಗೊಳ್ಳುತ್ತಿದ್ದು, ಸಮಸ್ಯೆಗಳೂ ಸಹ ಅಷ್ಟೇ ಪ್ರಮಾಣದಲ್ಲಿ ಉಲ್ಬಣಗೊಳ್ಳುವುದು ಸಹಜ. ಆದರೆ ಸಾರ್ವಜನಿಕ ಕ್ಷೇತ್ರದಲ್ಲಿರುವ ನಾವು ಯಾರೂ ಸಹ ನಮ್ಮ ಕರ್ತವ್ಯಗಳಿಂದ ವಿಮುಖರಾಗ ಕೂಡದು ಎಂದು ಎಂ.ಪಿ.ಅನಿತಾ ರಮೇಶ್ ಹೇಳಿದರು.
ನಗರಸಭೆಯ ಪ್ರಭಾರಿ ಅಧ್ಯಕ್ಷೆಯಾಗಿದ್ದ ಉಪಾಧ್ಯಕ್ಷೆ ಶಕೀಲಾಭಾನು ಅವರು ನೂತನ ಅಧ್ಯಕ್ಷೆ ಎಂ.ಪಿ.ಅನಿತಾರಮೇಶ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪೌರಾಯುಕ್ತರಾದ ಶ್ರೀಮತಿ ಲಕ್ಷ್ಮೀ, ಸ್ಥಾಯಿ ಸಮಿತಿ ಅಧ್ಯಕ್ಷ ನಸ್ರುಲ್ಲಾ, ನಗರಸಭೆ ಸದಸ್ಯರಾದ ಟಿ.ರಮೇಶ್, ಮೀನಾಕ್ಷಿ, ಹರಿಶ್, ನರಸಿಂಹಮೂರ್ತಿ, ಶ್ರೀನಿವಾಸ್, ನಗರಸಭೆ ಅಧಿಕಾರಿಗಳಾದ ಶ್ರೀಮತಿ ರೇಣುಕಾ, ಇಂಜಿನೀಯರ್ ರಾಜು, ಗುತ್ತಿಗೆದಾರ ಜೋಗಿಮಟ್ಟಿ ಈ.ಶಿವಕುಮಾರ್ ಇನ್ನಿತರರು ಹಾಜರಿದ್ದರು.
ಇಂಜಿನೀಯರ್ಸ್ ಡೇ ಆಚರಣೆ :
ನಗರ ಸಭೆಯ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಇಂಜಿನೀಯರ್ಸ್ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಗರಸಭೆ ನೂತನ ಅಧ್ಯಕ್ಷೆ ಎಂ.ಪಿ.ಅನಿತಾರಮೇಶ್ ಅವರು ಈ ಸಂದರ್ಭದಲ್ಲಿ ಮಾತನಾಡಿ, ಈ ದೇಶವನ್ನು ಕಟ್ಟಿದ ಹಲವರಲ್ಲಿ ಇಂಜಿಯರ್‍ಗಳ ಪಾತ್ರ ಪ್ರಮುಖವಾದದ್ದು. ಸರ್.ಎಂ.ವಿಶ್ವೇಶ್ವರಯ್ಯ ಅವರಂತಹ ಮೇರು ವ್ಯಕ್ತಿತ್ವದ ಮತ್ತು ಅಪಾರ ಜ್ಞಾನಹೊಂದಿದ್ದ ನಾಯಕರು ಹೆಸರು ಇಂದಿಗೂ ಚಿರಾಯವಾಗಿ ಉಳಿದೆ. ಅವರ ಕಾರ್ಯಶೈಲಿ ಮೆಚ್ಚುವಂತದ್ದು ಎಂದು ನುಡಿದರು.
ಮುಖ್ಯ ಇಂಜಿನೀಯರ್ ರಾಜು, ಇಂಜಿನೀಯರ್‍ಗಳಾದ ಅಬ್ದುಲ್ ಅಮೀರ್, ರಂಗಸ್ವಾಮಿ, ಮುನಿಸ್ವಾಮಿ, ಪೌರಾಯುಕ್ತೆ ಎಸ್.ಲಕ್ಷ್ಮೀ, ನಗರಸಭೆ ಅಧಿಕಾರಿ ಶ್ರೀಮತಿ ರೇಣುಕಾ, ಪುಟ್ಟಪ್ಪ,, ಗುತ್ತಿಗೆದಾರ ಜೋಗಿಮಟ್ಟಿ ಈ.ಶಿವಕುಮಾರ್, ಉಪಾದ್ಯಕ್ಷೆ ಶಕಿಲಾ ಭಾನು, ಸ್ಥಾಯಿ ಸಮಿತಿ ಅಧ್ಯಕ್ಷ ನಸ್ರುಲ್ಲಾ, ಸದಸ್ಯ ಟಿ.ರಮೇಶ್ ಇನ್ನಿತರರು ಹಾಜರಿದ್ದರು.
ನಗರಸಭೆಯ ಇಂಜಿನೀಯರ್ಸ್ ವಿಭಾಗದಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಎಲ್ಲಾ ವಿಭಾದ ಇಂಜಿನೀಯರ್‍ಗಳು, ವಿವಿಧ ಅಧಿಕಾರಿಗಳು, ಸಿಬ್ಬಂದಿಗಳು, ನಗರಸಭೆ ಸದಸ್ಯರುಗಳು ಪಾಲ್ಗೊಂಡಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್