Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಾಳೆ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರ 75ನೇ ಹುಟ್ಟು ಹಬ್ಬ : ಚಿತ್ರದುರ್ಗದಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳು

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಸೆ.16 : ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ 75ನೇ ಹುಟ್ಟು ಹಬ್ಬದ ಪ್ರಯುಕ್ತ ಬಿಜೆಪಿ ಜಿಲ್ಲಾ ಘಟಕ ಹಾಗೂ ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲವತಿಯಿಂದ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ತಿಳಿಸಿದ್ದಾರೆ.

ಸೆಪ್ಟೆಂಬರ್ 17 ರ ಬೆಳಿಗ್ಗೆ 10.30ಕ್ಕೆ ರಂಗಯ್ಯನ ಬಾಗಿಲು ಬಳಿ ಇರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬಿಜೆಪಿ ಜಿಲ್ಲಾ ಘಟಕದವತಿಯಿಂದ ನಡೆಸಲಾಗುವುದು, ಇದಾದ ನಂತರ ನಗರ ಮತ್ತು ಗ್ರಾಮಾಂತರ ಮಂಡಲ ವತಿಯಿಂದ ರಕ್ತದಾನ ಶಿಬಿರವನ್ನು ಚಿತ್ರದುರ್ಗ ನಗರದ ಮುರುಘರಾಜೇಂದ್ರ ಆಟದ ಮೈದಾನದ ಎದುರು ಇರುವ ಬಂಜಾರ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮಕ್ಕೆ ಜಿಲ್ಲಾಧ್ಯಕ್ಷರಾದ ಕೆ.ಟಿ. ಕುಮಾರಸ್ವಾಮಿ, ಮಾಜಿ ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ ಹಾಗೂ ಮಂಡಲ ಅಧ್ಯಕ್ಷರು ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now