Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ: ಬಿಎಲ್‍ಓ ಮತ್ತು ಮೇಲ್ವಿಚಾರಕರಿಗೆ ತರಬೇತಿ ನೀಡಿ : ಎಡಿಸಿ ಬಿ.ಟಿ.ಕುಮಾರಸ್ವಾಮಿ

---Advertisement---

 

ಚಿತ್ರದುರ್ಗ. ಸೆ.16: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಅನ್ನು ಕೈಗೊಳ್ಳುವ ಸಂಬಂಧ ಭಾರತ ಚುನಾವಣಾ ಆಯೋಗವು ಹಾಗೂ ಮುಖ್ಯ ಚುನಾವಣಾ ಆಯೋಗವು ನೀಡಿರುವ ಸುತ್ತೋಲೆ, ನಿರ್ದೇಶನಗಳು ಮತ್ತು ಪಿಪಿಟಿಗಳನ್ನು ಆಧಾರಿಸಿ ಬಿಎಲ್‍ಓ ಮತ್ತು ಬಿಎಲ್‍ಓ ಮೇಲ್ವಿಚಾರಕರಿಗೆ ಸೂಕ್ತ ತರಬೇತಿ ನೀಡಿ, ಮನೆ ಮನೆಗೆ ಸಮೀಕ್ಷೆಗೆ ಸಜ್ಜುಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಹಾಗೂ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ಕೈಗೊಳ್ಳುವ ಸಂಬಂಧ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ 2026ಅನ್ನು ಕೈಗೊಳ್ಳುವ ಸಂಬಂಧ 2002ರ ಮತದಾರರ ಪಟ್ಟಿಗೂ ಹಾಗೂ 2025ರ ಮತದಾರರ ಪಟ್ಟಿಗೂ ತಾಳೆ ಮಾಡಿ ಮತದಾರರ ಅಂಕಿ ಅಂಶಗಳನ್ನು ನಿಗಧಿತ ನಮೂನೆಯಲ್ಲಿ ಸಹಿ ಮಾಡಿ ದೃಢೀಕರಿಸಿ ಸಲ್ಲಿಸಬೇಕು ಎಂದು ಹೇಳಿದರು.

ತಮ್ಮ ವ್ಯಾಪ್ತಿಯ ಎಲ್ಲಾ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಬಿಎಲ್‍ಎ ಗಳನ್ನು ನೇಮಕ ಮಾಡುವಂತೆ ತಿಳಿಸುವುದು ಹಾಗೂ ಪಟ್ಟಿಯನ್ನು ಪಡೆದು ಸಲ್ಲಿಸಬೇಕು ಎಂದು ತಿಳಿಸಿದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ: ಹಿಂದುಳಿದ ವರ್ಗಗಳ ಇಲಾಖೆಯಿಂದ ಸರಬರಾಜಾಗಿರುವ ಕುಟುಂಬ ಅನುಸೂಚಿತ ನಮೂನೆಗಳನ್ನು ಈಗಾಗಲೇ ತಾಲ್ಲೂಕು ಆರೋಗ್ಯಾಧಿಕಾರಿಗಳ ಮುಖಾಂತರ ಆಶಾ ಕಾರ್ಯಕರ್ತೆಯರಿಗೆ ತಲುಪಿಸಿದ್ದು, ಇವರು ಮನೆ ಮನೆಗೆ ನಮೂನೆಗಳನ್ನು ವಿತರಿಸಿರುವ ಬಗ್ಗೆ ಮೇಲ್ವಿಚಾರಣೆ ಮಾಡಲು ತಿಳಿಸಲಾಯಿತು. ಮನೆ ಮನೆ ಸಮೀಕ್ಷೆ ಕಾರ್ಯ ಕೈಗೊಳ್ಳಲು ಗಣತಿದಾರರನ್ನು ನೇಮಕ ಮಾಡುವುದು, ಸಮೀಕ್ಷೆಗೆ ನೇಮಕವಾದ ಎಲ್ಲ ಗಣತಿದಾರರಿಗೆ ಮಾಸ್ಟರ್ ಟ್ರೈನರ್‍ಗಳಿಂದ ಅಗತ್ಯ ತರಬೇತಿ ನೀಡಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಉಪವಿಭಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪುಷ್ಪಲತಾ ಹಾಗೂ ಜಿಲ್ಲೆಯ ಎಲ್ಲ ತಹಶೀಲ್ದಾರ್‍ಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...