ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 17 : ಚಲಿಸುತ್ತಿದ್ದ ಕಾರು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಕಾರಿನಲ್ಲಿದ್ದ ಓರ್ವ ಯುವಕ ಸಜೀವ ದಹನವಾದ ಘಟನೆ ನಡೆದಿದೆ.
ತಾಲ್ಲೂಕಿನ ಅರಳೀಕಟ್ಟೆ ಬಳಿ ಈ ದುರ್ಘಟನೆ ನಡೆದಿದ್ದು, ಅರಳೀಕಟ್ಟೆ ಗ್ರಾಮದ ಸಿದ್ದೇಶ್ವರ(35 ವರ್ಷ) ಮೃತ ದುರ್ದೈವಿ. ಮಂಗಳವಾರ ರಾತ್ರಿ ಹಿರಿಯೂರಿನಿಂದ ಅರಳೀಕಟ್ಟೆಗೆ ವಾಪಸಾಗುವ ವೇಳೆ ಕಾರು ಆಕಸ್ಮಿಕ ಬೆಂಕಿಯಿಂದಾಗಿ ಕಾರು ಸಂಪೂರ್ಣವಾಗಿ ಸುಟ್ಟ ಹೋಗಿದ್ದು ಕಾರಿನಲ್ಲಿದ್ದ ಯುವಕ ಕೂಡಾ ಸುಟ್ಟು ಕರಕಲಾಗಿ ಹೋಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.






