Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಳಂದ ಕ್ಷೇತ್ರ : ರಾಹುಲ್ ಗಾಂಧಿ ಜೊತೆಗೆ ಭದ್ರವಾಗಿ ನಿಲ್ತೇನೆ ಎಂದ್ರು ಡಿಕೆಶಿ

ಡಿಕೆ ಶಿವಕುಮಾರ್
---Advertisement---

ಬೆಂಗಳೂರು: ರಾಜ್ಯದಲ್ಲಿ ಮತಗಳ್ಳತನವಾಗಿದೆ ಎಂದು ರಾಹುಲ್ ಗಾಂಧಿ ಈ ಮೊದಲೇ ದೊಡ್ಡಮಟ್ಟದಲ್ಲಿ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಹೋರಾಟವನ್ನು ಮಾಡಿದ್ದರು. ಕಾಂಗ್ರೆಸ್ ನಾಯಕರೆಲ್ಲ ಸೇರಿ ಆ ಹೋರಾಟಕ್ಕೆ ಕೈಜೋಡಿಸಿದ್ದರು. ಇದೀಗ ರಾಹುಲ್ ಗಾಂಧಿ ಅವರು ಆಳಂದ ಕ್ಷೇತ್ರದ ಮತದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಇದೀಗ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನಾನು ರಾಹುಲ್ ಗಾಂಧಿ ಅವರ ಜೊತೆಗೆ ದೃಢವಾಗಿ ನಿಲ್ಲುತ್ತೇನೆ. ಭಾರತದ ಜನ ಪಾರದರ್ಶಕತೆ, ನ್ಯಾಯ ಸಮ್ಮತತೆಗೆ ಅರ್ಹರು. ಆದರೆ ಮತದಾರರನ್ನು ಗುರಿಯಾಗಿಸಿಕೊಂಡು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಗುಪ್ತ ಕಾರ್ಯಾಚರಣೆಗಳು ನಡೆಯುತ್ತಿವೆ‌. ಕಾಂಗ್ರೆಸ್ ನ ಬಲಿಷ್ಠ ಬೂತ್ ಗಳಲ್ಲಿ ಕಾನೂನು ಬದ್ಧ ಮತಗಳನ್ನು ಅಳಿಸಲು ಸಾಫ್ಟ್ ವೇರ್, ಹೊರಗಿನವರ ಹಸ್ತಕ್ಷೇಪ ಬಳಕೆ ಆಳಂದ ಕ್ಷೇತ್ರದ ಸಾಕ್ಷಿಗಳಿಂದ ಗೊತ್ತಾಗುತ್ತದೆ.

ಇದು ಆಘಾತಕಾರಿ ಜನರ ಧ್ವನಿಯನ್ನು ಅಡಗಿಸಲು ಉದ್ದೇಶ ಪೂರ್ವಕ ಮತ್ತು ಯೋಜಿತ ಪ್ರಯತ್ನವಾಗಿದೆ. ನಾವೂ ನಮ್ಮ ಧ್ವನಿ ಎತ್ತುವುದನ್ನು, ದಾಖಲೆಗಳನ್ನು ಬಹಿರಂಗಪಡಿಸುವುದನ್ನು ಮುಂದುವರೆಸುತ್ತೇವೆ, ವೋಟ್ ಚೋರಿ ಫ್ಯಾಕ್ಟರಿ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಆಳಂದ ಕ್ಷೇತ್ರದಲ್ಲಿ 2023ರ ಎಲೆಕ್ಷನ್ ವೇಳೆ 6018 ಮತದಾರರನ್ನು ಡಿಲೀಟ್ ಮಾಡಲು ಯತ್ನಿಸಿದ್ದರು. ಬೇರೆ ರಾಜ್ಯಗಳ ಫೋನ್ ನಂಬರ್ ಬಳಕೆ ಮಾಡಲಾಗಿದೆ. ಕಾಂಗ್ರೆಸ್ ವೋಟ್ ಗಳನ್ನೇ ಟಾರ್ಗೆಟ್ ಮಾಡಲಾಗಿದೆ. ಸೂರ್ಯಕಾಂತ್ ಹೆಸರು ಬಳಸಿ 14 ನಿಮಿಷದಲ್ಲಿ 12 ವೋಟ್ ಡಿಲೀಟ್ ಮಾಡಲಾಗಿದೆ. ಕಾಂಗ್ರೆಸ್ ಬಲವಾಗಿರುವ ಬೂತ್ ಗಳನ್ನೇ ಟಾರ್ಗೆಟ್ ಮಾಡಿ, ಮತಗಳ್ಳತನ ಮಾಡಲಾಗಿದೆ ಎಂದು ರಾಹುಲ್ ಗಾಂಧಿ ಅವರು ನಿನ್ನೆ ಮಾತನಾಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now