Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

331 ಹೊಸ ಜಾತಿಗಳಿಗೆ ಸಚಿವರಿಂದಲೇ ವಿರೋಧ : ಸಚಿವ ಸಂಪುಟದಲ್ಲಿ ಏನೆಲ್ಲಾ ಆಯ್ತು..?

---Advertisement---

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಈ ಸಭೆಯಲ್ಲಿ ಜಾತಿ ಗಣತಿಯ ವಿಚಾರದ ಬಗ್ಗೆ ಸದ್ಯ ಸಂಪುಟದಲ್ಲೂ ಜೋರು ಚರ್ಚೆಯಾಗಿದೆ. ಈ ವಿಚಾರಕ್ಕೆ ಸಚಿವರೆಲ್ಲಾ ವಿರೋಧ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿ ಸಮೀಕ್ಷೆ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆಯಾಗಿದೆ. ಸೆಪ್ಟೆಂಬರ್ 22ರಿಂದ ಜಾತಿಗಣತಿ ಆರಂಭವಾಗಲಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದೆ. ಈ ಸಭೆಯಲ್ಲಿ ಕೆಲ ಸಚಿವರು ಸಿದ್ದರಾಮಯ್ಯ ಮುಂದೆಯೂ ಏರುಧ್ವನಿಯಲ್ಲಿಯೇ ವಿರೋಧ ಮಾಡಿರುವ ಘಟನೆ ನಡೆದಿದೆ. 331 ಹೊಸದಾಗಿ ಜಾತಿಗಳ ಸೇರ್ಪಡೆ ಯಾಗುತ್ತಿರುವುದಕ್ಕೆ ವಿರೋಧಿಸಿರುವ ಕೆಲ ಸಚಿವರು ಹೊಸ ಜಾತಿಗಳ ಸೇರ್ಪಡೆಯಿಂದ ಗೊಂದಲ ಸೃಷ್ಟಿಯಾಗಿದೆ. ಈ ಗೊಂದಲವನ್ನು ಸರಿಪಡಿಸದ ಹೊರತು ಜಾತಿಗಣತಿ ಬೇಡ. ಒಂದು ವೇಳೆ ಗೊಂದಲದ ನಡುವೆ ಜಾತಿಗಣತಿ ಮುಂದುವರೆಸಿದರೆ ತೊಂದರೆಯೂ ಬರಬಹುದು ಎಂದು ಸಂಪುಟ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ ಎನ್ನಲಾಗಿದೆ.

ಸಮೀಕ್ಷೆ ಮುಂದುವರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಭೈರತಿ ಸುರೇಶ್, ಸಂತೋಷ್ ಲಾಡ್ ಹಾಗೂ ಕೆ.ಹೆಚ್.ಮುನಿಯಪಗಪ ಮಾತ್ರ ಒಲವು ತೋರಿಸಿದ್ದಾರೆ. ಸಂಪುಟ ಸಭೆಯಲ್ಲಿ ಸೇರಿದ್ದ ಭಾಗಶಃ ಸಚಿವರು ವಿರೋಧಿಸಿದ್ದಾರೆ. ಹೀಗಾಗಿ ಜಾತಿಗಣತಿ ಸಮೀಕ್ಷೆ ಮುಂದೂಡಿಕೆಯಾಗುತ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಈ ಮೊದಲೇ ಬಿಡುಗಡೆಯಾದ ಜಾತಿಗಣತಿಯ ವರದಿಯನ್ನ ವಿರೋಧ ಪಕ್ಷದವರು ಸೇರಿದಂತೆ ಹಲವರು ವಿರೋಧಿಸಿದ್ದರು. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಹೊಸದಾಗಿ ಜಾತಿಗಣತಿ ಮಾಡುವಂತೆ ಸೂಚನೆ ನೀಡಿತ್ತು. ಅದರಂತೆ ಕಾಂಗ್ರೆಸ್ ಸರ್ಕಾರ ಮತ್ತೆ ಜಾತಿಗಣತಿಗೆ ಸಮೀಕ್ಷೆಗೆ ಸೂಚನೆ ನೀಡಿದೆ. ಸೆಪ್ಟೆಂಬರ್ 22 ರಿಂದ ಶುರುವಾಗಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...