ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಲ್ಸ್ ಜಾರಿಯಲ್ಲಿದ್ದರು ಸಹ ನಿನ್ನೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಶುರು ಮಾಡಿದ್ದಾರೆ. ಈ ಸಂಬಂಧ ಈಗಾಗಲೇ ಕಾಂಗ್ರೆಸ್ ನ 30 ನಾಯಕರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಈ ಸಂಬಂಧ ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾಯ್ದೆ ಉಲ್ಲಂಘಿಸಿದ್ದಕ್ಕಾಗಿ ಮೊಕದ್ದಮೆ ದಾಖಲಿಸಲಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದೆ. ಸೋಂಕಿನ ನಡುವೆಯೂ ಕಾಂಗ್ರೆಸ್ ನವರು ಚೆಲ್ಲಾಟವಾಡುತ್ತಿದ್ದಾರೆ. ಪಾದಯಾತ್ರೆ ನಡೆಸಿ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಕೊರೊನಾ ನಿಯಂತ್ರಣ ಕಾಯ್ದೆ ಉಲ್ಲಂಘಿಸಿದವರ ವಿರುದ್ಧ ರಾಮನಗರ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಲಿದೆ ಎಂದಿದ್ದಾರೆ.
ಕಾಂಗ್ರೆಸ್ ನಾಯಕರದ್ದು ನೀರಿನ ಮೇಲೆ ರಾಜಕೀಯ ಮಾಡುವುದು. ಆದ್ರೆ ನಮ್ಮ ಉದ್ದೇಶ ಜನರ ಆರೋಗ್ಯ ಕಾಪಾಡುವುದು. ಕೊರೊನಾ ಸೋಂಕು ಉಲ್ಬಣಗೊಂಡು, ಜನ ಸಂಕಷ್ಟಕ್ಕೆ ಸಿಲುಕಿದರೆ ಕಾಂಗ್ರೆಸ್ ನಾಯಕರು ಹೊಣೆ ಹೊರಬೇಕಾಗುತ್ತದೆ. ಕಾಂಗ್ರೆಸ್ ನಾಯಕರ ನಡವಳಿಕೆ ಅತ್ಯಂತ ಹೊಣೆಗೇಡಿತನ ಎಂದು ಆಕ್ರೋಶ ಹೊರ ಹಾಕಿದ್ದಾರೆ.