Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಇನ್ನು ಎರಡು ದಿನ ರಾಜ್ಯದಲ್ಲಿ ಜೋರು ಮಳೆ..!

---Advertisement---

 

ರಾಜ್ಯಾದ್ಯಂತ ಜೋರು ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ಮತ್ತಷ್ಟು ಮಳೆ ಜೋರಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಬಹುತೇಕ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಮಳೆ ಬೆಳೆ ನಂಬಿಕೊಂಡಿದ್ದ ಅದೆಷ್ಟೋ ರೈತರು ಹೊಲಗಳಿಗೆ ಗೊಬ್ಬರ ಹಾಕಿ ಮಳೆಗಾಗಿ ಕಾಯುತ್ತಾ ಕೂತಿದ್ದರು. ಸದ್ಯ ವರುಣರಾಯ ಕೃಪೆ ತೋರಿದ್ದು, ಜೋರು ಮಳೆಯಾಗುತ್ತಿದೆ.

ಕರ್ನಾಟಕದ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡಕ್ಕೆ ಯಾವುದೇ ಅಲರ್ಟ್ ನೀಡಿಲ್ಲ. ಉಳಿದಂತೆ ರಾಜ್ಯ ಎಲಗಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಜಾರಿ ಮಾಡಲಾಗಿದೆ. ಅದರಲ್ಲೂ ಮುಂದಿನ ಎರಡು ದಿನ ಬಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ 115 ಮಿ.ಮೀವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಹೀಗಾಗಿ ಯೆಲ್ಲೋ ಅಲರ್ಟ್ ನಡುವೆಯೂ ಕೆಲವು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಗರಿಕರು ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ ಭಾಗದಲ್ಲಿ ಗಾಳಿ, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ವರದಿ‌ ಕೊಟ್ಟಿದೆ. ಸಿಲಿಕಾನ್ ಸಿಟಿಯಲ್ಲಂತು ಮಳೆ ಕಡಿಮೆಯಾಗುವಂತೆ ಕಾಣಿಸುತ್ತಿಲ್ಲ. ಸರಿಯಾಗಿ ಸಂಜೆ ವೇಳೆಗೆ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಇದರಿಂದ ಕಚೇರಿಯಿಂದ ಹೊರಡುವ ಕೆಲಸಗಾರರಿಗೆ ಸಮಸ್ಯೆಯಾಗುತ್ತಿದೆ. ಬೆಂಗಳೂರಿನಲ್ಲಿ ನಾಳೆ ಹಾಗೂ ನಾಡಿದ್ದು ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...