Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಾಯುಭಾರ ಕುಸಿತ :ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಯಾವೆಲ್ಲಾ ಜಿಲ್ಲೆಗಳಿಗೆ ಜೋರು ಮಳೆ

---Advertisement---

ಬೆಂಗಳೂರು: ವಾಯುಭಾರ ಕುಸಿತದ ಪರಿಣಾಮ ಕರ್ನಾಟಕಕ್ಕೂ ಜೋರು ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು, ಚಿತ್ರದುರ್ಗದ ಹಲವೆಡೆ ಗುಡಿಗು ಸಹಿತ ಮಳೆಯಾಗಲಿದೆ. ಹೀಗಾಗಿ ಹವಮಾನ ಇಲಾಖೆ ವರದಿ ನೀಡಿದ್ದು, ಮುಂದಿನ ಐದು ದಿನಗಳ ಕಾಲ ಎಚ್ಚರವಾಗಿರಬೇಕೆಂದು ಸೂಚನೆ ನೀಡಿದೆ.

ಬಳ್ಳಾರಿ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಮೇಲೆ ಸರಾಸರಿ ಸಮುದ್ರ ಮಟ್ಟಕ್ಕಿಂತ 5.8 ಕಿ ಮೀಟರ್ ಎತ್ತರದಲ್ಲಿ ಮೇಲ್ಮುಖ ವಾಯು ಚಂಡಮಾರುತದ ಪ್ರಸರಣ ಕಡಿಮೆಯಾಗಿದೆ. ಮಧ್ಯಪ್ರದೇಶದ ಮಧ್ಯ ಭಾಗಗಳಿಂದ ಪಶ್ಚಿಮ – ಮಧ್ಯ ಮತ್ತು ಪಕ್ಕದ ನೈರುತ್ಯ ಬಂಗಾಳ ಕೊಲ್ಲಿಯವರೆಗೆ ಪೂರ್ವ ವಿದರ್ಭ, ತೆಲಂಗಾಣ ಮತ್ತು ದಕ್ಷಿಣ ಕರಾವಳಿ ಆಂಧ್ರ ಪ್ರದೇಶದಾದ್ಯಂತ ಸರಾಸರಿ ಸಮುದ್ರ ಮಟ್ಟಕ್ಕಿಂತ 0.9 ಕಿ.ಮೀಟರ್ ಎತ್ತರದಲ್ಲಿ ವಾಯು ಚಂಡ ಮಾರುತ ಕಡಿಮೆಯಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ, ಕೊಪ್ಪಳ, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರಿ, ಬಾಗಲಕೋಟರ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು, ಸಹಿತ ಜೋರು ಮಳೆಯಾಗಲಿದೆ. ಹೀಗಾಗಿ ಜನರಿಗೆ ಎಚ್ಚರದಿಂದ ಇರಲು ಸೂಚನೆ ನೀಡಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...