ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, : ತಾಲ್ಲೂಕಿನ ಕೆನ್ನಡಲು ಗ್ರಾಮದ ಮುಂಭಾಗದಲ್ಲಿರುವ ಸೇತುವೆ ಮರು ನಿರ್ಮಾಣ ಮಾಡುವಂತೆ ಜೈಭೀಮ್ ವಾರಿಯರ್ಸ್ ಕರ್ನಾಟಕ ವತಿಯಿಂದ ಸಂಸದ ಗೋವಿಂದ ಕಾರಜೋಳರವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
ಒಂದು ಸಾವಿರ ಜನಸಂಖ್ಯೆಯುಳ್ಳ ಕೆನ್ನಡಲು ಗ್ರಾಮದಲ್ಲಿ ಎಲ್ಲಾ ಜಾತಿಯವರು ಅನ್ಯೋನ್ಯವಾಗಿ ಜೀವಿಸುತ್ತಿದ್ದಾರೆ. 70 ವರ್ಷಗಳ ಹಳೆಯದಾಗಿರುವ ಸೇತುವೆ ಶಿಥಿಲಾವಸ್ಥೆಯಲ್ಲಿದ್ದು, ಯಾವಾಗ ಕುಸಿಯಲಿದೆಯೋ ಎನ್ನುವುದನ್ನು ಹೇಳುವಂತಿಲ್ಲ. ಗ್ರಾಮಸ್ಥರು ಜೀವ ಭಯದಲ್ಲಿಟ್ಟುಕೊಂಡು ಸೇತುವೆ ಮೇಲೆ ಸಂಚರಿಸಬೇಕಾಗಿದೆ. ನೂರಾರು ವಾಹನಗಳು ಇಲ್ಲಿಯೇ ಓಡಾಡಬೇಕು. ಸುತ್ತಲೂ ಬೆಟ್ಟ ಗುಡ್ಡಗಳಿರುವುದರಿಂದ ಕಾಡು ಪ್ರಾಣಿಗಳು ಗ್ರಾಮದೊಳಗೆ ಪ್ರವೇಶಿಸುತ್ತವೆ. ರಾತ್ರಿ ವೇಳೆ ಕತ್ತಲೆಯಾಗಿರುವುದರಿಂದ ಹೈಮಾಸ್ ದೀಪ ಅಳವಡಿಸಬೇಕು. ಜಮೀನಿಗೆ ಹೋಗಲು ರೈತರಿಗೆ ತೊಂದರೆಯಾಗಿರುವುದರಿಂದ ಸಿ.ಸಿ.ರಸ್ತೆ ನಿರ್ಮಾಣ ಮಾಡುವಂತೆ ಸಂಸದರಲ್ಲಿ ಗ್ರಾಮಸ್ಥರು ವಿನಂತಿಸಿದರು.
ಜೈಭೀಮ್ ವಾರಿಯರ್ಸ್ ಕರ್ನಾಟಕ ರಾಜ್ಯಾಧ್ಯಕ್ಷ ಪಿ.ಆರ್.ಹರೀಶ್‍ಕುಮಾರ್, ಜಿಲ್ಲಾಧ್ಯಕ್ಷ ಪ್ರಸನ್ನಕುಮಾರ್, ಉಮೇಶ್ ಡಿ. ರಂಗಸ್ವಾಮಿ, ಜಿ.ರವಿಕುಮಾರ್, ಸಂದೇಶ್‍ಕುಮಾರ್, ಮಲ್ಲಿಕಾರ್ಜುನ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್