Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೆಪ್ಟೆಂಬರ್ 27ರವರೆಗೆ ಮಳೆ ಮುಂದುವರಿಕೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

---Advertisement---

ಬೆಂಗಳೂರು: ಕಳೆದ ಕೆಲ ದಿನಗಳ ಹಿಂದಷ್ಟೆ ಮಳೆ ಕೊಂಚ ಬ್ರೇಕ್ ನೀಡಿತ್ತು. ಆದ್ರೆ ಮಳೆ ಬೆಳೆ ನಂಬಿಕೊಂಡ ರೈತರು ಆದಷ್ಟು ಬೇಗ ವರುಣರಾಯ ದಯೆ ತೋರಪ್ಪ ಅಂತಿದ್ರು. ಅದಕ್ಕೆ ತಕ್ಕಂತೆ ಇದೀಗ ಮಳೆ ಶುರುವಾಗಿದೆ. ರಾಜ್ಯದೆಲ್ಲೆಡೆ ಅಲ್ಲಲ್ಲಿ ಮಳೆಯಾಗುತ್ತಿದೆ. ಸೆಪ್ಟೆಂಬರ್ 27ರವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಿದೆ.

ಕರ್ನಾಟಕದಾದ್ಯಂತ ಮತ್ತೆ ಮಳೆ ಶುರುವಾಗಿದ್ದು, ಕೆಲವೆಡೆ ಅವಾಂತರಗಳು ಕೂಡ ಸೃಷ್ಟಿಯಾಗಿದೆ. ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕ ಭಾಗಗಳಲ್ಲಿ ಮುಂಗಾರು ಚುರುಕಾಗಿದೆ. ಹೀಗಾಗಿ ಬಾಗಲಕೋಟರ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಹಾಗೇ ಶಿವಮೊಗ್ಗ, ಕೊಡಲು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಸೆಪ್ಟೆಂಬರ್ 27ರವರೆಗೂ ಮಳೆಯಾಗುವ ಸೂಚನೆ ನೀಡಿದೆ. ಈಗಾಗಲೇ ಉಡುಪಿ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದಾನೂ ಧಾರಾಕಾರ ಮಳೆಯಾಗುತ್ತಿದೆ. ತಾಪಮಾನ ಏರಿಕೆ, ಹವಮಾನ ವೈಪರೀತ್ಯ್ಇಂದಾಗಿ ಉಡುಪಿ ಜಿಲ್ಲೆಯಲ್ಲಿ ಮಳೆಯಾಗಿದೆ. ಆ ಭಾಗದಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇದೆ. ಹೀಗಾಗಿ ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹೊರಗೆ ಹೋಗುವವರು ಸ್ವಲ್ಪ ಎಚ್ಚರಿಕೆ ವಹಿಸಬೇಕು. ಮುಂಜಾಗ್ರತೆಯನ್ನು ವಹಿಸಬೇಕಾಗಿದೆ. ಸದ್ಯ ರೈತರಿಗಂತು ಈ ಮಳೆಯ ಸುದ್ದಿ ಸಂತಸ ತಂದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now